fbpx
ಸಮಾಚಾರ

ಒಟ್ಟಿಗೆ ಎರಡು ಹೊಸ ರಿಲೀಸ್ ಡೇಟ್ ಘೋಷಿಸಿದ RRR: ಎರಡು ದಿನಾಂಕ ಘೋಷಿಸಿದ್ದು ಈ ಕಾರಣಕ್ಕೆ ಅಂತೇ

ದೇಶಾದ್ಯಂತ ಕೊರೋನಾ ಮೂರನೇ ಅಲೆ ಜೋರಾಗಿದ್ದು ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿದೆ. ಇನ್ನೂ ಕೆಲ ರಾಜ್ಯಗಳಲ್ಲಿ ಶೇ 50ರಷ್ಟು ಮಾತ್ರ ಆಸನಕ್ಕೆ ಅವಕಾಶ ನೀಡಲಾಗಿದೆ. ಹಾಗಾಗಿ 2022ರ ಆರಂಭದಲ್ಲಿ ಬಿಡುಗಡೆಯಾಗಬೇಕಿದ್ದ ಹಲವು ಚಿತ್ರಗಳು ಮುಂದೂಡಿವೆ. ಅದರಲ್ಲಿ RRR ಚಿತ್ರ ಕೂಡ ಒಂದು.

 

 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ RRR ಚಿತ್ರ ಜನವರಿ ಮೊದಲ ವಾರದಲ್ಲಿ ತೆರೆಕಾಣಬೇಕಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಚಿತ್ರದ ಬಿಡುಗಡೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿತ್ತು. ಇದೀಗ ಸಿನಿಮಾ ಮತ್ತೆ ಯಾವಾಗ ರಿಲೀಸ್ ಎನ್ನುವ ಬಗ್ಗೆ ಚಿತ್ರ ತಂಡ ಅಧಿಕೃತ ಮಾಹಿತಿ ನೀಡಿದೆ.

ಒಂದೇ ಬಾರಿಗೆ ಎರಡೆರಡು ರಿಲೀಸ್ ದಿನಾಂಕವನ್ನು ಪ್ರಕಟಿಸಿದೆ. ಚಿತ್ರದ ದಿನಾಂಕ ಪ್ರಕಟ ಮಾಡಿ ಪೋಸ್ಟರ್ ಒಂದನ್ನು ಚಿತ್ರ ತಂಡ ಹಂಚಿಕೊಂಡಿದೆ. “ದೇಶದಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸಿದರೆ ಮತ್ತು ಥಿಯೇಟರ್ ಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಅವಕಾಶ ನೀಡಿದರೆ, ನಾವು ಚಿತ್ರವನ್ನು 2022 ಮಾರ್ಚ್ 18ಕ್ಕೆ ರಿಲೀಸ್ ಮಾಡುತ್ತೇವೆ. ಇಲ್ಲವಾದಲ್ಲಿ RRR ಚಿತ್ರ 2022 ಏಪ್ರಿಲ್ 28ಕ್ಕೆ ರಿಲೀಸ್ ಆಗಲಿದೆ” ಎಂದು ಚಿತ್ರತಂಡ ಪ್ರಕಟಣೆಯಲ್ಲಿ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top