fbpx
ಸಮಾಚಾರ

ಶಾಕಿಂಗ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆ’ತ್ಮಹತ್ಯೆಗೆ ಶರಣು

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂಬಾಕೆ ಇಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯಗೆ ಸದ್ಯ 30ವರ್ಷ ವಯಸ್ಸಾಗಿತ್ತು. ಮೃತ ಸೌಂದರ್ಯಗೆ ಒಂದು ಮಗು ಇದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಸೌಂದರ್ಯ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ವಿಧಿವಿಧಾನಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

ಸದ್ಯ ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನಿರಂಜನ್ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಸೌಂದರ್ಯ ಪತಿ ನಿರಂಜನ್ ರಾಮಯ್ಯ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಫ್ರೊಫೆಸರ್ ಆಗಿದ್ದು, ಬೆಳಗ್ಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸದವರು ಪದೇಪದೇ ಬಾಗಿಲು ಬಡಿದರೂ ಬಾಗಿಲು ತೆರೆದಿಲ್ಲ. ಪತಿಗೆ ಫೋನ್ ಮಾಡಿ ಕೆಲಸದವರು ಹೇಳಿದ್ದು, ಅವರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top