fbpx
ಸಮಾಚಾರ

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾರಿ ನಿರಾಸೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಭಿಮಾನಿಗಳೂ ಸೇರಿದಂತೆ ಕನ್ನಡ ಸಿನಿ ಪ್ರೇಕ್ಷಕರಿಗೆ ಭಾರಿ ನಿರಾಸೆ ಉಂಟಾಗಿದೆ. ಫೆಬ್ರವರಿ 24ರಂದು ತೆರೆಕಾಣಬೇಕಿದ್ದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದಕ್ಕೆ ಹಾಕಿದ್ದು ಶೀಘ್ರದಲ್ಲೇ ಬೇರೆ ದಿನಾಂಕ ಘೋಷಿಸುವುದಾಗಿ ಹೇಳಿದೆ. ಸದ್ಯ ದೇಶಾದ್ಯಂತ ಕಾಡುತ್ತಿರುವ ಕೊರೋನಾ ಮೂರನೇ ಅಲೆ ಹಾಗೂ ಕೋವಿಡ್ ನಿರ್ಬಂಧಗಳ ಕಾರಣದಿಂದ ಈ ನಿರ್ಧಾರಕ್ಕೆ ಚಿತ್ರತಂಡ ಬಂದಿದೆ.

 

 

“ಈ ಕುರಿತು ಚಿತ್ರತಂಡ ಹೇಳಿಕೆ ರಿಲೀಸ್ ಮಾಡಿದೆ. ನಮ್ಮ ಕನಸನ್ನು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಧಿಸಿದ ನಿಯಮಾವಳಿಗಳು ಪ್ರಪಂಚಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ.”

“ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎನ್ನುವ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಿಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸುತ್ತೇವೆ” ಎಂದು ವಿಕ್ರಾಂತ್ ರೋಣ ತಂಡ ಪ್ರಕರಣೆಯಲ್ಲಿ ತಿಳಿಸಿದೆ.

ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ.

ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಅದ್ದೂರಿ ವೆಚ್ಚದಲ್ಲಿ ತಯಾರಾಗಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳು ಮೂಡಿವೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ಗಳು ಮತ್ತು ಟೀಸರ್ ಗಳು ಒಂದ್ಕಕಿಂದ ಒಂದು ಭಿನ್ನವಾಗಿದ್ದು ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿವೆ. ಆದಷ್ಟು ಬೇಗ ಚಿತ್ರವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗಂತೂ ರಿಲೀಸ್ ಡೇಟ್ ಮುಂದಕ್ಕೆ ಹೋಗಿದ್ದು ನಿರಾಸೆ ತಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top