ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಎಂಬಾಕೆ ಇಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯಗೆ ಸದ್ಯ 30ವರ್ಷ ವಯಸ್ಸಾಗಿತ್ತು. ಮೃತ ಸೌಂದರ್ಯಗೆ ಒಂದು ಮಗು ಇದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಸೌಂದರ್ಯ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ವಿಧಿವಿಧಾನಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.
ಸದ್ಯ ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ವೃತ್ತಿಯಲ್ಲಿ ವೈದ್ಯೆಯಾಗಿದ್ದರೂ ಅವರು ಆತ್ಮಹತ್ಯೆಗೆ ಶರಣಾಗಿರುವುದು ಅವರ ಸಾವಿನ ಸುತ್ತ ಅನುಮಾನದ ಹುತ್ತ ಕಟ್ಟಿಕೊಳ್ಳುತ್ತಿದೆ. ಒಂಭತ್ತು ತಿಂಗಳ ಹಿಂದೆ ಸೌಂದರ್ಯ ಡೆಲಿವರಿ ಆಗಿತ್ತು. ಕಳೆದ 3 ತಿಂಗಳ ಹಿಂದೆ ಸೌಂದರ್ಯ ಮನೆಗೆ ಮರಳಿದ್ದರು. ಅವರ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣವಾಗಿಹೋಯಿತೆ ಎಂಬ ಅನುಮಾನ ಕೂಡ ವ್ಯಕ್ತವಾಗುತ್ತಿದೆ. ಸೌಂದರ್ಯ ಗಂಡ ನಿರಂಜನ್ ರಾಮಯ್ಯ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಫ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗಂಡ ಹೆಂಡತಿ ನಡುವೆ ಸದಾ ಜಗಳವಾಗುತ್ತಿತ್ತು ಅದೇ ಕಾರಣಕ್ಕೆ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
