fbpx
ಸಮಾಚಾರ

ನಟಿ ಮೇಲೆ ಸ್ಯಾಂಡಲ್‍ವುಡ್ ನಟ ಕಮ್ ನಿರ್ದೇಶಕನ ವಿರುದ್ಧ ಅ’ತ್ಯಾಚಾರ: ಪ್ರಕರಣ ದಾಖಲು

ಕನ್ನಡ ಚಿತ್ರರಂಗದ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ರೇಪ್​ ಕೇಸ್ ದಾಖಲಾಗಿದೆ.

ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರ ಮಾಡುತ್ತಿದ್ದ ಈ ಮಹಿಳೆ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಪೊಲೀಸರು ಹರ್ಷವರ್ಧನ್​ ಅವರನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಈ ನಟಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ದೂರಿನಲ್ಲಿ ಏನಿದೆ?
‘’ನನ್ನನ್ನು ಮದುವೆ ಮಾಡಿಕೊಳ್ಳುತ್ತೇನೆ, ನೀನೇ ನನ್ನ ಹೆಂಡತಿ ಎಂದು ಹರ್ಷವರ್ಧನ್ ನಂಬಿಸಿದ್ದ. ಕಳೆದ 2 ವರ್ಷದಿಂದ ನನ್ನನ್ನು ದೈಹಿಕವಾಗಿ ಬಳಸಿಕೊಂದ್ದಾನೆ. ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದ. ಇತ್ತೀಚಿಗೆ ಮದುವೆ ಆಗೋಣ ಅಂತ ನಾನು ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಚಿತ್ರಹಿಂಸೆ ನೀಡಿದ್ದಾನೆ. ಹೊರಗಡೆ ಈ ವಿಚಾರದ ಬಗ್ಗೆ ಹೇಳಿಕೊಂಡರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top