fbpx
ಸಮಾಚಾರ

ಬಿಜೆಪಿ ನಾಯಕ ಸಿಟಿ ರವಿ ತಂದೆ ವಿಧಿವಶ

ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ತಂದೆ ತಿಮ್ಮೇಗೌಡ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷ ತಿಮ್ಮೇಗೌಡ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

 

 

ಬಹು ಅಂಗಾಂಗ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮೇಗೌಡ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ತಿಮ್ಮೇಗೌಡ ಇಹಲೋಕ ತ್ಯಜಿಸಿದ್ದಾರೆ.

ಮೃತರು ತಿಮ್ಮೇಗೌಡ ಅವರು ಪತ್ನಿ ಹೊನ್ನಮ್ಮ, ಪುತ್ರರಾದ ಸಿಟಿ ರವಿ, ಸಿಟಿ ರಘು, ಪುತ್ರಿಯರಾದ ರೇಣುಕಾ, ರೋಹಿಣಿ, ರೇವತಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಳೆ ಸಿಟಿ ರವಿ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top