fbpx
ಸಮಾಚಾರ

ಮಣ್ಣಲ್ಲಿ ಮಣ್ಣಾದ ಸೌಂದರ್ಯ: ಬಿಎಸ್‌ವೈ ಸೇರಿ ಕುಟುಂಬಸ್ಥರಿಂದ ಅಂತ್ಯಕ್ರಿಯೆ, ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ

ಅಬ್ಬಿಗೆರೆ ಫಾರಂ ಹೌಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗಳಾದ ಸೌಂದರ್ಯ ಅವರ ಅಂತ್ಯಕ್ರಿಯೆ ನೆರವೇರಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ ಕಾರ್ಯಕ್ರಗಳನ್ನ ನೆರವೇರಿಸಿ ವಿಭೂತಿ ಮತ್ತು ಬಿಲ್ವ ಪತ್ರೆ ಬಳಸಿ ಕ್ರಿಯಾ ಸಮಾಧಿ ಮಾಡಲಾಯಿತು. ಯಡಿಯೂರಪ್ಪ, ಕುಟುಂಬಸ್ಥರು, ಸಚಿವರು ಸೇರಿ ಬಂಧುಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತಿಮ ವಿಧಿವಿಧಾನ ಶಿವಗಂಗೆಯ ಹೊನ್ನಗವಿ ಮಠದ ರುದ್ರಮುನಿ ಸ್ವಾಮೀಜಿ ಸಮ್ಮುಖದಲ್ಲಿ ನೆರವೇರಿತು.

ಸೌಂದರ್ಯ ತಮ್ಮ ಫ್ಲ್ಯಾಟ್‌ನಲ್ಲಿ ನೆನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಫ್ಯಾನ್​ಗೆ ನೇಣು ಬಿಗಿದುಕೊಂಡು ಡಾ. ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಡಾ. ನೀರಜ್ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಘಟನೆ ನಡೆದಿದೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದ ಹಿನ್ನೆಲೆ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಪತಿ ಮನೆಗೆ ಬಂದು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು.

ಇನ್ನು ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಅಬ್ಬಿಗೆರೆ ಫಾರಂ ಹೌಸ್‌ನಲ್ಲಿ ಸೌಂದರ್ಯ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top