fbpx
ಸಮಾಚಾರ

ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕಲಾಸಾಮ್ರಾಟ್ ಎಸ್.ನಾರಾಯಣ್: ಯಾವ ಪಕ್ಷ ಗೊತ್ತಾ?

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ/ ನಟ ಎಸ್ ನಾರಾಯಣ್ ಅವರು ರಾಜಕೀಯದತ್ತ ಮುಖಮಾಡಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನ ನೀಡಿ ಅನೇಕ ನಟ ನಟಿಯರನ್ನು ಸಿನಿ ಜಗತ್ತಿಗೆ ಪರಿಚಯ ಮಾಡಿರುವ ಎಸ್ ನಾರಾಯಣ್ ಅವರು ಶೀಘ್ರದಲ್ಲೇ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಾರಾಯಣ್ ಪಕ್ಷ ಸೇರುತ್ತಿರುವ ಮಾಹಿತಿ ನೀಡಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. “”ನಮ್ಮ ಪಕ್ಷದ ಸಿದ್ಧಾಂತ, ಆದರ್ಶಗಳಿಂದ ಪ್ರೇರಿತರಾದ ನಟ, ನಿರ್ದೇಶಕ ಶ್ರೀ ಎಸ್. ನಾರಾಯಣ್ ಅವರು ಇಂದು ನನ್ನನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಅಭಿಲಾಷೆ ವ್ಯಕ್ತಪಡಿಸಿದರು. ಈ ಕುರಿತು ಅವರೊಂದಿಗೆ ಮಾತುಕತೆ ನಡೆಸಿದೆ.” ಎಂದು ಸೋಶಿಯಲ್ ಮೀಡಿಯಾದಲ್ಲಿ ಡಿಕೆಶಿ ಪೋಸ್ಟ್ ಮಾಡಿದ್ದಾರೆ.

 

 

ಅಂದಹಾಗೆ “ಎಸ್ ನಾರಾಯಣ್ ಅವರು ರಾಜಕೀಯಕ್ಕೆ ಬರುತ್ತಾರೆ” ಎಂಬ ಮಾತುಗಳು ಕಳೆದ ಕೆಲವು ವರ್ಷಗಳಿಂದ ಕೇಳಿಬರುತ್ತಲೇ ಇತ್ತು. ಅವರು ಜನತಾದಳ ಸೇರುತ್ತಾರೆ, ಬಿಜೆಪಿ ಸೇರುತ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎಂಬಿತ್ಯಾದಿ ಗಾಸಿಪ್ ಗಳು ಒಂದರಹಿಂದೊಂದರಂತೆ ಹಬ್ಬುತ್ತಲೇ ಇದ್ದವು. ಈಗ ಆ ಗಾಸಿಪ್ ರೂಮರ್ ಗಳಿಗೂ ತೆರೆಬಿದ್ದಿದ್ದು ಅವರು ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿಕೊಂಡು ರಾಜಕೀಯಕ್ಕೆ ಧುಮುಕುತ್ತಿದ್ದಾರೆ. ಚಿತ್ರರಂಗದಲ್ಲಿ ಅದ್ಭುತ ಯಶಸ್ಸು ಗಳಿಸಿರುವ ಎಸ್ ನಾರಾಯಣ್ ಅವರು ರಾಜಕೀಯ ರಂಗದಲ್ಲೂ ಅಷ್ಟೇ ಸಕ್ಸಸ್ ಕಾಣಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top