fbpx
ಸಮಾಚಾರ

KCC ಬ್ಯಾಂಕ್ ನೇಮಕಾತಿ 2022: 52 ಅಟೆಂಡರ್‌ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಧಾರವಾಡ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 52 ಸಿಪಾಯಿ (Attenders) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನವಾಗಿದೆ. ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ

ವಿದ್ಯಾರ್ಹತೆ:
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ ವಿವರ:.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,500 ರಿಂದ ರೂ. 24,000 ರೂ ವೇತನ ದೊರೆಯಲಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ (ಎಸ್.ಎಸ್.ಎಲ್.ಸಿ) ಪಡೆದ ಅಂಕಗಳನ್ನು ಪರಿಗಣಿಸಿ, ಅಂಕಗಳ ಶೇಕಡಾವಾರು ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು,
ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡಾ 85ಕ್ಕಿಳಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಸದರಿ ಅಂಕಗಳನ್ನು ಒಟ್ಟು ಸೇರಿಸಿ ರ್ಯಾಂಕಿಂಗ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಎಸ್​ಸಿ/ಎಸ್​ಟಿ/ಪ್ರವರ್ಗ-1/PH/ಮಾಜಿ ಸೈನಿಕ/ವಿಧವಾ ಅಭ್ಯರ್ಥಿಗಳಿಗೆ- 250 ರೂ. ಅರ್ಜಿ ಶುಲ್ಕ
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸದಸ್ಯ ಕಾರ್ಯದರ್ಶಿ
ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಕೆಸಿಸಿ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಸುಭಾಸ್ ರಸ್ತೆ
ಧಾರವಾಡ – ೫೮೦೦೦೧

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top