fbpx
ಸಮಾಚಾರ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022: 10ನೇ ತರಗತಿ ಪಾಸಾದವರಿಗೆ ಅರ್ಜಿ ಅಹ್ವಾನ

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪಾಸಾಗಿರಬೇಕು.

ಅನುಭವ:
ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.indiapost.gov.in ಗೆ ಭೇಟಿ ನೀಡಲು ಕೋರಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top