fbpx
ಸಮಾಚಾರ

ನಟಿ ಜಯಪ್ರದಾಗೆ ತಾಯಿ ನಿಧನ

ಹಿರಿಯ ನಟಿ ಬಿಜೆಪಿ ನಾಯಕಿ ಜಯಪ್ರದ ಅವರ ತಾಯಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಪ್ರದಾ ಅವರ ತಾಯಿ ನೀಲವೇಣಿ ಅವರು ಇಂದು ಹೈದರಾಬಾದ್‍ನಲ್ಲಿ ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ನೀಲವೇಣಿ ಅವರು ಅನಾರೋಗ್ಯಕ್ಕೀಡಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದೇ ಸಮಯದಲ್ಲಿ ರಾಜಕೀಯ ಕೆಲ್ಸದ ನಿಮಿತ್ತ ದೆಹಲಿಯಲ್ಲಿದ್ದ ಜಯಪ್ರದಾ ತಾಯಿ ಮೃತಪಟ್ಟಿರುವ ಸುದ್ದಿ ಕೇಳಿ ತಕ್ಷಣ ಹೈದರಾಬಾದ್​ ಕಡೆ ಪ್ರಯಾಣ ಬೆಳೆಸಿದರು. ಜಯಪ್ರದಾ ತಾಯಿಯ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top