fbpx
ಸಮಾಚಾರ

ಯೋಗಿ ಆದಿತ್ಯನಾಥ್‌ ನಾಮಪತ್ರ ಸಲ್ಲಿಕೆ : ಯುಪಿ ಸಿಎಂ ಹೊಂದಿರುವ ಒಟ್ಟು ಆಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶದಲ್ಲಿ ಸದ್ಯದಲ್ಲೇ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಹಾಲಿ ಮುಖ್ಯಮಂತ್ರಿ ನಾಮಪತ್ರ ಸಲ್ಲಿಸಿದ್ದಾರೆ. ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಆಸ್ತಿ ವಿವರವನ್ನು ನೀಡಿದ್ದು, ಅದರಲ್ಲಿ ಬ್ಯಾಂಕ್ ಖಾತೆಗಳ ಬಾಕಿ ಹಾಗೂ ಸ್ಥಿರ ಠೇವಣಿಗಳನ್ನು ಒಳಗೊಂಡಿದೆ.

ತಾವು 1,54,94,054 ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಅವರು ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ. ಇದು ಕೈಯಲ್ಲಿರುವ ನಗದು, ಆರು ಬ್ಯಾಂಕ್ ಖಾತೆಗಳ ಬಾಕಿ ಮತ್ತು ಉಳಿತಾಯವನ್ನು ಒಳಗೊಂಡಿರುತ್ತದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು 12,000 ರೂಪಾಯಿ ಮೌಲ್ಯದ ಸ್ಯಾಮ್‌ಸಂಗ್ ಮೊಬೈಲ್ ಫೋನ್, 1,00,000 ರೂಪಾಯಿ ಮೌಲ್ಯದ ರಿವಾಲ್ವರ್ ಮತ್ತು 80,000 ರೂಪಾಯಿ ಮೌಲ್ಯದ ರೈಫಲ್ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಕಿವಿಯಲ್ಲಿ ರೂ.49 ಸಾವಿರ ಮೌಲ್ಯದ 20 ಗ್ರಾಂ ಕಾಯಿಲ್, 10 ಗ್ರಾಂ ರುದ್ರಾಕ್ಷದ ಚಿನ್ನದ ರಿಂಗ್ ಇದೆ. ಇದರ ಬೆಲೆ 12 ಸಾವಿರ ರೂಪಾಯಿ ಇದೆ. ಮುಖ್ಯಮಂತ್ರಿ ಯೋಗಿ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ ಎಂದು ಆದಾಯದ ಮೂಲದ ಬಗ್ಗೆ ಸಿಎಂ ಯೋಗಿ ಮಾಹಿತಿ ನೀಡಿದ್ದಾರೆ. ಜೊತೆಗೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top