fbpx
ಸಮಾಚಾರ

ರಾಷ್ಟ್ರಧ್ವಜದ ಜಾಗದಲ್ಲಿ ಕೇಸರಿ ಧ್ವಜ ಹಾರಿಸಿದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ

ಶಾಲಾ ವಿದ್ಯಾರ್ಥಿಗಳ ನಡುವೆ ಎದ್ದಿರುವ ಹಿಜಾಬ್- ಕೇಸರಿ ಶಾಲು ವಿವಾದ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡದು ಕೊಂಡಿದ್ದು, ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಕಾಲೇಜಿನ ಧ್ವಜಸ್ತಂಭವನ್ನು ಏರಿ ಕೇಸರಿ ಧ್ವಜ ಹಾರಿಸಿದ್ದಾರೆ.

ದೇಶದ ಸ್ವಾಭಿಮಾನದ ಸಂಕೇತವಾಗಿರುವ ತ್ರಿವರ್ಣ ಧ್ವಜ ಹಾರಿಸುವ ಜಾಗದಲ್ಲಿ ಕೇಸರಿ ಶಾಲು ಹಾರಿಸಿದ್ದು ಅಕ್ಷಮ್ಯ ಅಪರಾಧ ಇದು ದೇಶದ್ರೋಹದ ಕೆಲಸ ಎಂಬ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿದೆ. ಈ ಮದ್ಯೆ ಘಟನೆ ಬಗ್ಗೆ ಸ್ವತಃ ಶಿಕ್ಷಣ ಸಚಿವ ನಾಗೇಶ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ..

ಇಂದಿನ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ಮಾಧ್ಯಮದವರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ “ರಾಷ್ಟ್ರಧ್ವಜದ ಜಾಗದಲ್ಲಿ ಕೇಸರಿ ಧ್ವಜ ಹಾರಿಸಿರುವ ಘಟನೆ ನಿಜಕ್ಕೂ ನಡೆದಿದ್ದರೆ ನಿಜಕ್ಕೂ ಖಂಡನೀಯ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುತ್ತಾರೆ” ಎಂದು ಹೇಳಿದರು.

ಒಟ್ಟನಲ್ಲಿ ಹೈಕೋರ್ಟ್ ವಿಚಾರಣೆ ನಡುವೆಯೇ ರಾಜ್ಯಾದ್ಯಂತ ಹಿಜಬ್- ಕೇಸರಿ ಶಾಲು ಸಂಘರ್ಷ ವಿಕೋಪಕ್ಕೆ ತಿರುಗುತ್ತಿದೆ. ರಾಜ್ಯದ ಹಲವಡೆ ಕಲ್ಲುತೂರಾಟ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಆಯಾ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top