ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರ ಮೇಲೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸಮರ ಸಾರಿದಂತೆ ಕಾಣುತ್ತಿದೆ. ರಮ್ಯಾ ಟ್ವೀಟ್ ಬೆನ್ನಲ್ಲೇ ಇಷ್ಟು ದಿನ ರಮ್ಯಾ ಎಲ್ಲಿದ್ದರೂ, ಈಗ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ ಎಂದು ಪ್ರಶ್ನಿಸಿದ್ದ ಮೊಹಮದ್ ನಲಪಾಡ್ಗೆ ತಿರುಗೇಟು ನೀಡಿದ್ದಾರೆ.
ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಶಾಸಕ ಎಂ.ಬಿ.ಪಾಟೀಲ್ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಇದಕ್ಕೆ ರಮ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಭೇಟಿಯಲ್ಲಿ ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ನಲಪಾಡ್ ಹರಿಹಾಯ್ದಿದ್ದರು. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಟಾಂಗ್ ಕೊಟ್ಟಿದ್ದರು.
This boy @nalapad is the honourable @IYCKarnataka president (on bail) son of MLA Harris, and he’s questioning my integrity. Wah! 👏🏽 pic.twitter.com/wsYFcxzF1h
— Divya Spandana/Ramya (@divyaspandana) May 12, 2022
ಇದಕ್ಕೆ ಟ್ವೀಟ್ ಮಾಡಿರುವ ರಮ್ಯಾ ಸಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೊಹಮ್ಮದ್ ನಲಪಾಡ್ ಅವರ ಮೇಲಿರುವ ಗಂಭೀರ ಆರೋಪಗಳ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ರಮ್ಯಾ ಈ ಹುಡುಗ ಮೊಹಮ್ಮದ್ ನಲಪಾಡ್, ಶಾಸಕ ಹ್ಯಾರಿಸ್ ಪುತ್ರ ಯುವ ಕಾಂಗ್ರೆಸ್ ಅಧ್ಯಕ್ಷ(ಜಾಮೀನಿನ ಮೇಲೆ) ಹೊರಗೆ ತಿರುಗಾಡಿಕೊಂಡಿದ್ದು ಇತ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ. ವಾಹ್ ಎಂದು ಟ್ವೀಟಿಸಿ ಚಾಟಿ ಏಟು ಕೊಟ್ಟಿದ್ದಾರೆ. ಅದಲ್ಲದೇ ನಲಪಾಡ್ ವಿರುದ್ಧ ಕೇಳಿಬಂದಿರುವ ಆರೋಪಗಳ ವರದಿಗಳನ್ನು ಕೂಡ ಲಗತ್ತಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
