fbpx
ಸಮಾಚಾರ

ಕೆ.ಎಲ್ ರಾಹುಲ್ ಜೊತೆ ಮಗಳ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟ ಸುನೀಲ್ ಶೆಟ್ಟಿ

ಕ್ರಿಕೆಟಿಗ ಕೆ.ಎಲ್ ರಾಹುಲ್ ಹಾಗೂ ಆತಿಯಾ ಶೆಟ್ಟಿ ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಡೆಸುತ್ತಿದ್ದು, ಈ ಸುದ್ದಿ ಸದ್ಯ ಖಾಸಗಿಯಾಗಿಯೇನು ಉಳಿದಿಲ್ಲ. ಈ ಜೋಡಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಹಲವು ಹಲವು ಅನುಮಾನಗಳಿಗೆ ತೆರೆ ಎಳೆದಿದೆ. ಇತ್ತೀಚೆಗಿನ ವರದಿಗಳ ಪ್ರಕಾರ ಈ ತಾರಾ ಜೋಡಿಯು ಈ ವರ್ಷಾಂತ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದೆಲ್ಲದರ ನಡುವೆ ಆತಿಯಾ ಶೆಟ್ಟಿಯವರ ತಂದೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಇದೀಗ ಈ ವಿವಾಹಕ್ಕೆ ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

ಈ ಕುರಿತು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸುನೀಲ್ ಶೆಟ್ಟಿ, ನನ್ನ ಆಶೀರ್ವಾದ ಯಾವಾಗಲೂ ಅವರೊಂದಿಗೆ ಇರುತ್ತದೆ ಎಂದು ಶುಭಹಾರೈಸಿದ್ದಾರೆ. ಕಾಲ ಬದಲಾಗಿದೆ ಅವರವರ ಇಚ್ಛೆಗೆ ಅನುಗುಣವಾಗಿ ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ. ನನ್ನ ಮಗಳು ಮತ್ತು ಮಗ ಇಬ್ಬರೂ ಜವಾಬ್ದಾರಿಯುತರಾಗಿದ್ದಾರೆ. ಅವರ ಭವಿಷ್ಯದ ನಿರ್ಧಾರ ಅವರೇ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲೂ ಇರುತ್ತದೆ ಎಂದಿದ್ದಾರೆ.

‘ಆಕೆ ನನ್ನ ಮಗಳು ಆಕೆ ಬೇಗ ಮದುವೆಯಾಗಬೇಕೆಂದು ನಾನು ಬಯಸುತ್ತೇನೆ. ಅದು ಎಷ್ಟು ಬೇಗ ಆಗುವುದು ಒಳ್ಳೆಯದು. ಆದರೆ, ಮದುವೆ ಅವರ ಆಯ್ಕೆಯಾಗಿದ್ದು, ಯಾವಾಗ ಆಗಬೇಕು ಎಂಬುದರ ಬಗ್ಗೆ ರಾಹುಲ್ –ಅತಿಯಾ ನಿರ್ಧಾರ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅವರ ಮೇಲೆ ನನ್ನ ಆಶೀರ್ವಾದ ಯಾವಾಗಲೂ ಇರುತ್ತದೆ’ ಎಂದು ಸುನೀಲ್ ಹೇಳಿಕೊಂಡಿದ್ದಾರೆ.

ಅಥಿಯಾ ಮತ್ತು ಕೆಎಲ್ ರಾಹುಲ್ ಒಂದು ವಿಷಯ ಮತ್ತು ಕಳೆದ ಎರಡು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ.ಅಷ್ಟೇ ಅಲ್ಲದೆ ರಾಹುಲ್ ಜೊತೆಗೆ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವಾಸಗಳಲ್ಲಿ ಅವರೊಂದಿಗೆ ಪ್ರಯಾಣಿಸುತ್ತಾರೆ ಎಂದು ವರದಿಯಾಗಿದೆ.ಇತ್ತೀಚಿಗೆ ಅತಿಯಾ ಸಹೋದರ ಅಹಾನ್ ಶೆಟ್ಟಿ ಅವರ ‘ತಡಪ್’ ಚಲನಚಿತ್ರದ ವಿಶೇಷ ಚಲನಚಿತ್ರ ಪ್ರದರ್ಶನದಲ್ಲಿ,ರಾಹುಲ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top