ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಹತ್ಯೆಗೈದಿದ್ದು, ಇದು ಉದ್ದೇಶಿತ ದಾಳಿಯ ಮತ್ತೊಂದು ನಿದರ್ಶನವಾಗಿದೆ. ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.
ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆದಿದೆ. ಗುಂಡಿ ದಾಳಿ ಬಳಿಕ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
#Terrorists fired upon one employee namely Shri Rahul Bhat from #minority community in Tehsildar office Chadoora, #Budgam. He has been shifted to hospital.@JmuKmrPolice
— Kashmir Zone Police (@KashmirPolice) May 12, 2022
ಬುದ್ಗಾಮ್ನ ತಹಸೀಲ್ದಾರ್ ಕಚೇರಿ ಚದೂರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಶ್ರೀ ರಾಹುಲ್ ಭಟ್ ಎಂಬ ನೌಕರನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ರಾಹುಲ್ ಭಟ್ ಅವರು, ಕಳೆದ ಆರು ತಿಂಗಳಲ್ಲಿ ಉಗ್ರರಿಂದ ಹತ್ಯೆಯಾದ ಮೂರನೇ ಕಾಶ್ಮೀರಿ ಪಂಡಿತರಾಗಿದ್ದಾರೆ. ಇನ್ನಿಬ್ಬರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಕಳೆದ ಅಕ್ಟೋಬರ್ನಿಂದ ಕಾಶ್ಮೀರದಲ್ಲಿ ಕೆಲವು ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತಿವೆ. ಈ ಬಲಿಪಶುಗಳಲ್ಲಿ ಹೆಚ್ಚಿನವರು ಕೆಲಸ ಅರಸಿ ಅಲ್ಲಿಗೆ ಬಂದ ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರಾಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
