fbpx
ಸಮಾಚಾರ

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‌ಐ ಅಭ್ಯರ್ಥಿಗಳು: ನ್ಯಾಯ ಸಿಗದಿದ್ರೆ ಟೆರರಿಸ್ಟ್‌ಗಳ ಜೊತೆ ಸೇರುವುದಾಗಿ ಎಚ್ಚರಿಕೆ

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪಿಎಸ್‌ಐ ಪರೀಕ್ಷಾ ಹರಗಣ ಸಂಬಂಧ ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆಂದು ತನಿಖೆ ನಡೆಯುತ್ತಿದ್ದು, ಈ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಅಲ್ಲದೇ ಮರು ಪರೀಕ್ಷೆ ನಡೆಸುವುದಾಗಿ ಸರ್ಕಾರ ಹೇಳಿದೆ. ಈ ಎಲ್ಲಾ ವಿಚಾರಗಳ ಮಧ್ಯೆ ಪರಿಧಶ್ರಮಪಟ್ಟು ಓದಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವವರಿಗೆ ಅನ್ಯಾಯ ಮಾಡಬೇಡಿ ಎಂದು ಅನೇಕ ಅಭ್ಯರ್ಥಿಗಳು ಧ್ವನಿ ಎತ್ತಿದ್ದಾರೆ. ಇದರಿಂದ ಬೇಸತ್ತ ಅಭ್ಯರ್ಥಿಗಳೀಗ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಜೊತೆಗೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

 

 

ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ. ತಮ್ಮ ಹೆಸರನ್ನು ಪತ್ರದಲ್ಲಿ ನಮೂದಿಸಿಲ್ಲ. ಪಿಎಸ್ಐ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಿ. ಆದರೆ ನಿಯತ್ತಿಂದ ಬರೆದವರಿಗೆ ಮೋಸ ಆಗಬಾರದು. 2021ರಲ್ಲಿ ನಡೆದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮವಾಗಿದೆ ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಎಂದು ಬರೆದಿದ್ದಾರೆ.

ಒಂದು ವೇಳೆ ನಮಗೆ ನ್ಯಾಯಕೊಡಿಸದೇ ಹೋದಲ್ಲಿ ಮುಂದೆ ಟೆರರಿಸ್ಟ್ ಗಳ ಕೈಜೋಡಿಸುವ ಎಚ್ಚರಿಕೆಯನ್ನು ಕೂಡಾ ಈ ಪತ್ರದ ಮೂಲಕ ನೀಡಲಾಗಿದೆ. ಮಾತ್ರವಲ್ಲ, ಟೆರೆರಿಸ್ಟ್ ಗಳ ಜೊತೆ ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿರುವುದಾಗಿಯೂ ಹೇಳಿದ್ದಾರೆ. ಅವರ ಬಳಿ ಹಣ ಪಡೆದ ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ ಅಂತ ಎಚ್ಚರಿಸಿದ್ದಾರೆ. ಒಟ್ಟು ಎಂಟು ಮಂದಿ ಇದ್ದು, ಎಲ್ಲರೂ ಒಟ್ಟಾಗಿ ಈ ನಿರ್ಧಾರ ಮಾಡಿರುವುದಾಗಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಆದರೆ ಈ ಎರಡು ಪುಟಗಳ ಪತ್ರದಲ್ಲಿ ಪತ್ರ ಬರೆದವರು ಯಾರು ಎಂಬುವುದನ್ನು ಉಲ್ಲೇಖಿಸಲಾಗಿಲ್ಲ. ನಾವು ಎಂಟು ಮಂದಿ ಇದ್ದೇವೆ ಎಂದು ಹೇಳಲಾಗಿದೆ ಹೊರತು ಹೆಸರು ಹಾಗೂ ಇನ್ನಿತರ ಯಾವುದೇ ಮಾಹಿತಿಯನ್ನು ನೀಡಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top