fbpx
ಸಮಾಚಾರ

ಹಾಡಿನಲ್ಲಿ ಕೇಂದ್ರ ಸರ್ಕಾರದ ಅಣಕ; ಕಮಲ್ ಹಾಸನ್ ವಿರುದ್ಧ ದೂರು ದಾಖಲು,, ಹಾಡಿನಲ್ಲಿ ಅಂಥದ್ದೇನಿದೆ?

ಖ್ಯಾತ ನಟ ಕಮಲ್ ಹಾಸನ್ ಅಭಿನಯದ ‘ವಿಕ್ರಮ್’ ಸಿನಿಮಾದ ಬಗ್ಗೆ ಸಿನಿಪ್ರೇಮಿಗಳಲ್ಲಿ ಒಂದಿಷ್ಟು ಬಗೆಯ ನಿರೀಕ್ಷೆಗಳು ಮೂಡಿವೆ. ಈ ಚಿತ್ರದ ಹಾಡೊಂದು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡು ಹೆಚ್ಚು ಸದ್ದು ಮಾಡುತ್ತಿದೆ. ‘ಪಾತಾಳ.. ಪಾತಾಳ’ ಎಂಬ ಸಾಹಿತ್ಯದಿಂದ ಆರಂಭವಾಗುವ ಈ ಹಾಡಿಗೆ ಇದೀಗ ಹೊಸ ಸಂಕಷ್ಟ ಎದುರಾಗಿದೆ.

ಕಮಲ್ ಈ ಹಾಡನ್ನು ಬರೆದು ಹಾಡಿದ್ದು, ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಯೂ ಟ್ಯೂಬ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಾಡು ವೈರಲ್‌ ಆಗಿದೆ. ಹಾಡಿನ ಸಾಲುಗಳಿಗೆ ಕಮಲ್‌ ಹೆಜ್ಜೆ ಹಾಕಿರುವ ರೀತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಟ್ವಿಟ್ಟರ್‌ ನಲ್ಲಿ ಹಾಡಿನ ವಿಡಿಯೋ ತುಣುಕು ಶೇರ್‌ ಆಗಿದೆ. ಆದರೆ ಈ ಮದ್ಯೆ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕ ಮಾಡಲಾಗಿದೆ ಎಂದು ದೂರು ದಾಖಲಾಗಿದೆ.

ಈ ಹಾಡನ್ನು ಕಮಲ್ ಹಾಸನ್ ಅವರೇ ಬರೆದು ಹಾಡಿರುವ ಹಾಡಾಗಿದೆ. ಈ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕಿಸುವ ಸಾಲುಗಳಿವೆ ಎಂದು ಚೆನ್ನೈನ ಕೊರುಕ್ಕುಪೆಟ್ಟೈ ನಿವಾಸಿಯಾದ ಸೆಲ್ವಂ ಅವರು ಕಮಲ್ ದೂರು ದಾಖಲಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಅಣಕಿಸಲಾಗಿದೆ ಮತ್ತು ಕೋವಿಡ್​ ನಿಧಿ ಸಂಗ್ರಹ ಹಣದ ಬಗ್ಗೆ ನಕಾರಾತ್ಮಕವಾಗಿ ಸಾಲಿನಲ್ಲಿ ಉಲ್ಲೇಖಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಹಿತ್ಯದ್ದಲ್ಲಿ ಇರುವುದೇನು?
‘ಖಜಾನೆ ಖಾಲಿ ಖಾಲಿ, ಖಜಾನೆ ಖಾಲಿ ಖಾಲಿ.. ರೋಗಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಖಜಾನೆಯಲ್ಲಿ ಹಣ ಉಳಿದಿಲ್ಲ. ಕೇಂದ್ರ ಸರ್ಕಾರದ ತಪ್ಪುಗಳಿಂದಾಗಿ ಈಗ ಏನೂ ಉಳಿದಿಲ್ಲ. ಕೀ ಈಗ ಕಳ್ಳನ ಬಳಿ ಇದೆ’ ಎಂಬ ಅರ್ಥವನ್ನು ನೀಡುತ್ತದೆ. ಹಾಡಿನ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸೆಲ್ವಂ ಎಂಬುವರು ದೂರು ದಾಖಲಿಸಿದ್ದಾರೆ. ಹಾಡಿನಲ್ಲಿ ಬರುವ ಈ ಸಾಲುಗಳನ್ನು ತೆಗೆದುಹಾಕಬೇಕು. ಇದರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳದಿದ್ದರೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top