fbpx
ಸಮಾಚಾರ

Breaking: ಕಾಂಗ್ರೆಸ್ ಪಕ್ಷಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ

ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಪೆಟ್ಟು ಬಿದ್ದಿದೆ. ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯದಲ್ಲಿ ಭಾರಿ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ.

 

 

ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆಯಬಹುದು ಎಂಬ ಮಾತುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಗುಜರಾತ್​ನ ಕಾಂಗ್ರೆಸ್ ನಾಯಕರು ತಮಗೆ ಸಹರಿಸುತ್ತಿಲ್ಲ. ಯುವಜನರ ಸಂಘಟನೆಗೆ ನೆರವಾಗುತ್ತಿಲ್ಲ ಎಂದು ಹಾರ್ದಿಕ್ ಪಟೇಲ್ ಈ ಮೊದಲು ಸಾರ್ವಜನಿಕವಾಗಿ ದೂರಿದ್ದರು.

“ಇಂದು ನಾನು ಧೈರ್ಯದಿಂದ ಕಾಂಗ್ರೆಸ್ ಪಕ್ಷದ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಈ ಹೆಜ್ಜೆಯ ನಂತರ, ಭವಿಷ್ಯದಲ್ಲಿ ಗುಜರಾತ್‌ಗಾಗಿ ನಾನು ನಿಜವಾಗಿಯೂ ಧನಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ.” ಎಂದು ಹಾರ್ದಿಕ್ ಪಟೇಲ್ ಟ್ವಿಟರ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top