fbpx
ಸಮಾಚಾರ

31 ವರ್ಷಗಳ ನಂತರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ.

ಕ್ಷಮಾಪಣೆ ಅರ್ಜಿಯನ್ನು ನಿರ್ಧರಿಸುವಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 142 ಅಂದರೆ ಸುಪ್ರೀಂ ಕೋರ್ಟ್‌ಗೆ ಸಂವಿಧಾನವು ನೀಡಿರುವ ಅನಿರ್ದಿಷ್ಟ ಅಧಿಕಾರವನ್ನು ಚಲಾಯಿಸಿದೆ, ರಾಜ್ಯಪಾಲರ ವಿಳಂಬದ ನಂತರ ಎಜಿ ಪೆರರಿವಾಲನ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಪೆರಾರಿವಾಲ್‍ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಕ್ಷಮಾಪಣೆ ಅರ್ಜಿ ಬಗ್ಗೆ ರಾಷ್ಟ್ರಪತಿಗಳು ನಿರ್ಧರಿಸುವವರೆಗೆ ನ್ಯಾಯಾಲಯ ಕಾಯಬೇಕು ಎಂಬ ಕೇಂದ್ರ ಮನವಿ ಮಾಡಿತ್ತು. ಆದರೆ ರಾಷ್ಟ್ರಪತಿಗಳು ನಿರ್ಧಾರ ಕೈಗೊಳ್ಳುವ ಮೊದಲೇ ಕೋರ್ಟ್ ಬಿಡುಗಡೆ ಮಾಡಲು ಸೂಚಿಸಿದೆ.

1991 ರಲ್ಲಿ ಗಾಂಧಿ ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವರಾಗಿದ್ದ ಪೆರಾರಿವಾಲನ್, ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಲು ಬಾಂಬ್‌ನಲ್ಲಿ ಬಳಸಲಾದ ಎರಡು 9 ವೋಲ್ಟ್ ಬ್ಯಾಟರಿಗಳನ್ನು ಖರೀದಿಸಿದ ಆರೋಪ ಹೊತ್ತಿದ್ದರು. 1998 ರಲ್ಲಿ ಟಾಡಾ ನ್ಯಾಯಾಲಯವು ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಅದಾದ ಮರು ವರ್ಷ ಸುಪ್ರೀಂ ಕೋರ್ಟ್‌ ಶಿಕ್ಷೆಯನ್ನು ಎತ್ತಿಹಿಡಿಯಿತು. ಆದರೆ 2014 ರಲ್ಲಿ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.

2016 ಮತ್ತು 2018 ರಲ್ಲಿ, ಜೆ ಜಯಲಲಿತಾ ಮತ್ತು ಎಕೆ ಪಳನಿಸಾಮಿ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಶಿಫಾರಸು ಮಾಡಿತು. ಆದರೆ ನಂತರದ ರಾಜ್ಯಪಾಲರು ಅದನ್ನು ಅನುಸರಿಸದೆ ಅಂತಿಮವಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದರು. ಕ್ಷಮಾದಾನ ಅರ್ಜಿಯ ಬಗ್ಗೆ ದೀರ್ಘಕಾಲದಿಂದ ಯಾವುದೇ ತೀರ್ಮಾನವಾಗದ ಕಾರಣ, ಅಪರಾಧಿಗಳು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top