fbpx
ಸಮಾಚಾರ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ

ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ನಾಗಭೂಷಣ ಅವರು ಮಧ್ಯರಾತ್ರಿ ಸುಮಾರು 12.15ಕ್ಕೆ ಶಿವಮೊಗ್ಗದಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದರು. ಸ್ವಯಂ ನಿವೃತ್ತಿ ಪಡೆದ ನಂತರ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.

ಡಿ.ಎಸ್.‌ ನಾಗಭೂಷಣ್‌ ಅವರು ಬೆಂಗಳೂರಿನಲ್ಲಿ 1952ರಲ್ಲಿ ಜನಿಸಿದ್ದರು. ಅಕಾಶವಾಣಿ ದೆಹಲಿ ಕೇಂದ್ರದಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ 1981ರವರೆಗೆ ಸೇವೆ ಸಲ್ಲಿಸಿದ್ದಾರೆ. ನಂತರ ನಿಲಯದ ಸಹಾಯಕ ನಿರ್ದೇಶಕರಾಗಿ 7 ವರ್ಷ ಸೇವೆ ಸಲ್ಲಿಸಿದ್ದರು. ಅವರ “ಗಾಂಧಿ ಕಥನ” ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮೆ ಪ್ರಶಸ್ತಿ ಸಿಕ್ಕಿದೆ.

‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’, ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’ ಇವು ಅವರ ಪ್ರಮುಖ ಕೃತಿಗಳು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top