fbpx
ಸಮಾಚಾರ

SSLC ಫಲಿತಾಂಶ ಪ್ರಕಟ: ಈ ವರ್ಷ ಎಷ್ಟು ವಿದ್ಯಾರ್ಥಿಗಳು 625ಕ್ಕೆ625 ತೆಗೆದಿದ್ದಾರೆ ಗೊತ್ತಾ?

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  ಗುರುವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ವಿಷಯವನ್ನು ಪ್ರಕಟಿಸಿದರು.

ಈಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಸರ್ಕಾರಿ ಶಾಲೆಗಳ 21 ವಿದ್ಯಾರ್ಥಿಗಳು ಹಾಗೂ ಅನುದಾನಿತ ಶಾಲೆಗಳ 8 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಅನುದಾನ ರಹಿತ ಖಾಸಗಿ ಶಾಲೆಗಳ 116 ಮಕ್ಕಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ಕಳೆದ ಬಾರಿ ಅಂದರೆ 2021 ಸಾಲಿನಲ್ಲಿನ 157 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳಿಸಿದ್ದರು.

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top