fbpx
ಸಮಾಚಾರ

SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ karresults.nic.in,sslc.karnataka.gov.in ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಪರೀಶಿಲಿಸಬಹುದು.

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ರಿಸಲ್ಟ್ ನೋಡುವುದು ಹೇಗೆ?
ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಅಥವಾ http://karresults.nic.in./ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
ಸ್ಟೆಪ್ 3: ಆ ನೋಟಿಫಿಕೇಶನ್‌ನಲ್ಲಿ ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2020ರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಹಾಗೂ ಇನ್ನಿತರೆ ಕೇಳಲಾಗಿರುವ ಮಾಹಿತಿಗಳನ್ನು ನಮೂದಿಸಿ ಸ್ಟೆಪ್ 5: ನಂತರ Submit Button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ರಿಸಲ್ಟ್ ಪ್ರತಿಯನ್ನು ಪ್ರಿಂಟೌಟ್ ತೆಗೆದುಕೊಳ್ಳಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top