ಕನ್ನಡಿಗರೊಬ್ಬರು ದೂರದ ಕೆನಡಾ ದೇಶದಲ್ಲಿ ಸಂಸದರಾಗಿ ಆಯ್ಕೆಯಾಗಿರುವುದೇ ಕನ್ನಡಿಗರಾಗಿ ನಮಗೆಲ್ಲಾ ಹೆಮ್ಮೆಯ ವಿಚಾರ. ಹೀಗಿರುವಾಗ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು.
I spoke in my mother tongue (first language) Kannada in Canadian parliament.
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT— Chandra Arya (@AryaCanada) May 19, 2022
ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಸಂತೋಷ ತಂದಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ದ್ವಾರಳು ಗ್ರಾಮದ ವ್ಯಕ್ತಿಯೊರ್ವ ಕೆನಡಾದಲ್ಲಿ ಸಂಸದನಾಗಿ ಅಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.
I spoke in my mother tongue (first language) Kannada in Canadian parliament.
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT— Chandra Arya (@AryaCanada) May 19, 2022
ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಹಾಗೂ ನಟ ಸಾರ್ವಭೌಮ ಡಾ.ರಾಜ್ಕುಮಾರ್ ಹಾಡಿರುವ ‘ಎಲ್ಲಾದಾರೂ ಇರು ಎಂತಾದರೂ ಇರು. .ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳಿ ತಮ್ಮ ಮಾತು ಮುಗಿಸಿದ್ದಾರೆ. ಚಂದ್ರಆರ್ಯ ಅವರ ಭಾಷಾ ಪ್ರೇಮ ಕಂಡು ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ