fbpx
ಸಮಾಚಾರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸದಾನಂದ

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಸದಾನಂದ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದಾನಂದ ಮದುವೆಯ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಸದಾನಂದ ಸರಳವಾಗಿ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ. ನೆಚ್ಚಿನ ನಟನ ಹೊಸ ಬಾಳಿಗೆ ಸ್ನೇಹಿತರು ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ಈ ಸರಳ ವಿವಾಹ ಕಾರ್ಯಕ್ರಮದಲ್ಲಿ ಕೇವಲ ಕುಟುಂಬಸ್ಥರು ಮತ್ತು ಸ್ನೇಹಿತರು ಮಾತ್ರ ಭಾಗವಿಸಿದ್ದರು.

ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕು ಸುಲ್ತಾನ್‌ಪುರ ಗ್ರಾಮದ ಪ್ರತಿಭೆ ಸದಾನಂದ ದುರ್ಗಪ್ಪ ಕಾಳೆ ಅವರು ಖಾಸಗಿ ಚಾನೆಲ್‌ನ್ನ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದರು. ಸಾಕಷ್ಟು ಸೀರಿಯಲ್ ಮತ್ತು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಸದಾನಂದ ತಮ್ಮ ಅಮೋಘ ನಟನೆಯಿಂದ ಗಮನ ಸೆಳೆದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top