fbpx
ಸಮಾಚಾರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ನೇಮಕಾತಿ: 176 ಹುದ್ದೆಗಳಿಗೆ ಅರ್ಜಿ ಅಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವವರೆಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರುಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 11,2022 ರಿಂದ ಜೂನ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ. ಒಟ್ಟು ಹುದ್ದೆಗಳಿಗೆ 176 ಅರ್ಜಿ ಅಹ್ವಾನ ಮಾಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ :
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೇಮಕಾತಿಯ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಸಲ್ಲಿಕೆ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://bdabangalore.org/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 11,2022 ರಿಂದ ಜೂನ್ 18,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ನೇಮಕಾತಿ ಮಾನದಂಡ
– ಕಳೆದ 10 ವರ್ಷಗಳಲ್ಲಿ ಕೆಪಿಎಸ್‌ಸಿಯಿಂದ ಎಫ್‌ಡಿಎ/ಎಸ್‌ಡಿಎ ಅಥವಾ ತತ್ಸಮಾನ ಹುದ್ದೆಗಳಾಗಿ ನೇರವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
-ನಗರಾಭಿವೃದ್ಧಿ ಇಲಾಖೆ ಮತ್ತು ಕಂದಾಯ ಇಲಾಖೆಯಲ್ಲಿ ಎಫ್‌ಡಿಎ/ಎಸ್‌ಡಿಎ ಅಥವಾ ತತ್ಸಮಾನ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ
-ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿ, ನಿಯೋಜನಾ ಆದೇಶವನ್ನು ಪಡೆದ ನಂತರ ಪ್ರಾಧಿಕಾರದಲ್ಲಿ ನಿಯೋಜನೆ ಮೇರೆಗೆ ನೇಮಿಸಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕುಮಾರ ಪಾರ್ಕ್‌ ಪಶ್ಚಿಮ, ಟಿ.ಚೌಡಯ್ಯ ರಸ್ತೆ, ಬೆಂಗಳೂರು-560020.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18-06-2022

ನೇಮಕಾತಿ ಕುರಿತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top