fbpx
ಸಮಾಚಾರ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ–20 ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್ ನಾಯಕ, 3 ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಗೆ ಸ್ಥಾನ

ಮುಂದಿನ ತಿಂಗಳು ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಚೇತನ್ ಶರ್ಮ ನೇತೃತ್ವದ ಆಯ್ಕೆ ಸಮಿತಿ, ತಂಡವನ್ನು ಪ್ರಕಟಿಸಿದೆ. ಕನ್ನಡಿಗ ಕೆಎಲ್ ರಾಹುಲ್ ಟಿ20 ತಂಡಕ್ಕೆ ನಾಯಕರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಬಹುಕಾಲದ ಬಳಿಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಮೂರು ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಟಿ20 ತಂಡಕ್ಕೆ ಮರಳಿದ್ದಾರೆ.

ಟಿ–20 ಸರಣಿಗೆ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ವೆಂಕಟೇಶ್ ಅಯ್ಯರ್ ಅವರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು‌ ಮೊಹ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಇಂತಿದೆ:
ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top