fbpx
ಸಮಾಚಾರ

ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಭಾರತೀಯ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಭೇಟಿಯಾಡಿರುವ ಕೆಜಿಎಫ್ 2 ಚಿತ್ರದ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಸಿನಿಮಾದಲ್ಲಿ ಧೂಮ್ರಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.

ಕ್ಯಾನ್ಸರ್ ರೋಗಿಗಳ ನೆರವು ಸಂಘ, ಬೆಂಗಳೂರು ಕಡೆಯಿಂದ ಹೈಕೋರ್ಟ್ ಗೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿ ಯಾವುದೇ ಸಮಾಜಿಕ ಕಳಕಳಿ ಇಲ್ಲ, ಸಿನಿಮಾ ಪೂರ್ತಿ ಧೂಮಪಾನವನ್ನು ವಿಜೃಂಭಿಸಲಾಗಿದೆ. ಇದರಿಂದಾಗಿ ಮಕ್ಕಳು ಮತ್ತು ಯುವಕರ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಸಿನಿಮಾ ತಡೆ ಹಿಡಿದು, ಸೆನ್ಸಾರ್ ಮಂಡಳಿಯು ಕೊಟ್ಟಿರುವ ಯು/ಎ ಪ್ರಮಾಣ ಪತ್ರವನ್ನು ವಾಪಸ್ಸು ಪಡೆಯಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು.

ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠವು ಅರ್ಜಿಯನ್ನು ವಜಾ ಮಾಡಿದೆ. ‘ಈಗಾಗಲೇ ಸಿನಿಮಾ ರಿಲೀಸ್ ಆಗಿದೆ. ಪ್ರದರ್ಶನವನ್ನೂ ಕಾಣುತ್ತಿದೆ. ಹಾಗಾಗಿ ಅರ್ಜಿ ವಿಚಾರಣೆಯ ಮಾನ್ಯತೆ ಕಳೆದುಕೊಂಡಿದೆ’ ಎಂದು ವಾದ ಮಂಡಿಸಿದರು. ಈ ವಾದವನ್ನು ಆಲಿಸಿದ ಪೀಠ ಅರ್ಜಿಯನ್ನು ವಜಾ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top