fbpx
ಸಮಾಚಾರ

IPL 2022 ಕ್ವಾಲಿಫೈಯರ್ 2: ಮಹತ್ವದ ಪಂದ್ಯಕ್ಕೆ ಬದಲಾವಣೆ ಮಾಡುತ್ತಾ? ಇಲ್ಲಿದೆ RCBಯ ಸಂಭಾವ್ಯ ಪ್ಲೇಯಿಂಗ್ xi

ಹದಿನೈದನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಕ್ವಾಲಿಫೈಯರ್‌ 2ನೇ ಪಂದ್ಯ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ. ರಾಜಸ್ತಾನ್ ರಾಯಲ್ಸ್ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಈ ಆಟದಲ್ಲಿ ಗೆಲುವಿಗಾಗಿ ಸೆಣಸಾಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಈಗಾಗಲೇ ಫೈನಲ್ ಪ್ರವೇಶಿಸಿರುವ ಗುಜರಾತ್ ತಂಡದ ಜೊತೆ ಅಂತಿಮ ಪಂದ್ಯದಲ್ಲಿ ಟ್ರೋಪಿಗಾಗಿ ಸೆಣಸಾಡಲಿದೆ.

ಎರಡೂ ತಂಡಗಳಿಗೂ ಸಹ ಈ ಪಂದ್ಯ ಮಹತ್ವದ್ದಾಗಿದ್ದು, ಇತ್ತಂಡಗಳೂ ಸಹ ಗೆಲ್ಲುವತ್ತ ಚಿತ್ತ ನೆಟ್ಟಿವೆ. ಇನ್ನು ಈ ಎರಡೂ ತಂಡಗೂ ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯ ಇದಾಗಿದ್ದು, ಲೀಗ್ ಹಂತದಲ್ಲಿ ಇತ್ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದವು. ಹಾಗೂ ಈ ಎರಡು ಪಂದ್ಯಗಳಲ್ಲಿ ಇತ್ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿದ್ದವು.

ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ತನ್ನ ಆಡುವ ಹನ್ನೊಂದರಲ್ಲಿ ಬದಲಾವಣೆ ತರುವುದು ಅನುಮಾನ. ಎಲಿಮಿನೇಟರ್‌ ಪಂದ್ಯದಲ್ಲಿ ಆಡಿಸಿದ ಆಟಗಾರರನ್ನೇ ಕಾಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನು ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್‌ ಸಿರಾಜ್‌ ಹೆಚ್ಚು ರನ್‌ ಕೊಡುತ್ತಿರುವುದು ಆರ್‌ಸಿಬಿ ಅಭಿಮಾನಿಗಳಲ್ಲಿ ಚಿಂತೆ ಮೂಡಿಸುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ Xi: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top