fbpx
ಸಮಾಚಾರ

ಬೋನಿ ಕಪೂರ್ ಕ್ರೆಡಿಟ್ ಕಾರ್ಡ್ ನಕಲು ಮಾಡಿ 3.82 ಲಕ್ಷ ರೂ. ಕನ್ನ ಹಾಕಿದ ಖದೀಮ

ಬಾಲಿವುಡ್ ಖ್ಯಾತ ನಿರ್ಮಾಪಕ ಮತ್ತು ಉದ್ಯಮಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯೊಬ್ಬ 3.82 ಲಕ್ಷ ರೂ. ವಂಚಿಸಿರುವ ಘಟನೆ ಜರುಗಿದೆ. ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿ ಫೆಬ್ರವರಿ 9 ರಂದು ಕಪೂರ್ ಅವರ ವಿವರಗಳು ಮತ್ತು ಪಾಸ್‍ವರ್ಡ್ ಪಡೆಯುವ ಮೂಲಕ ಐದು ಬಾರಿ ಆನ್‍ಲೈನ್ ವಹಿವಾಟುಗಳನ್ನು ನಡೆಸಲು ಕ್ರೆಡಿಟ್ ಕಾರ್ಡ್ ಬಳಸಿದ್ದಾನೆ. ಈ ವೇಳೆ ಕಪೂರ್ ಖಾತೆಯಿಂದ ಒಟ್ಟು 3.82 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕಪೂರ್ ದೂರು ಸಲ್ಲಿಸಿದ್ದಾರೆ. ‘ನನ್ನ ಕ್ರೆಡಿಟ್ ಕಾರ್ಡ್ ವಿವರಗಳನ್ನು ಯಾರೂ ಕೇಳಿರಲಿಲ್ಲ. ಈ ಬಗ್ಗೆ ಯಾವುದೇ ಫೋನ್ ಕರೆ ಸ್ವೀಕರಿಸಿರಲಿಲ್ಲ’ ಎಂದು ಕಪೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದೂರಿನಲ್ಲಿ ಏನಿದೆ?
ಈ ದೂರಿನಲ್ಲಿ, ಅಪರಿಚಿತ ವ್ಯಕ್ತಿ ಫೆಬ್ರವರಿ 9 ರಂದು ಕಪೂರ್ ಅವರ ವಿವರಗಳು ಮತ್ತು ಪಾಸ್‍ವರ್ಡ್ ಪಡೆಯುವ ಮೂಲಕ ಐದು ಬಾರಿ ಆನ್‍ಲೈನ್ ವಹಿವಾಟುಗಳನ್ನು ನಡೆಸಲು ಕ್ರೆಡಿಟ್ ಕಾರ್ಡ್ ಬಳಸಿದ್ದಾನೆ. ಮಾರ್ಚ್ 30 ರಂದು ತಮ್ಮ ಬ್ಯಾಂಕ್ ಕಾರ್ಯ ನಿರ್ವಾಹಕರು ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಕರೆ ಮಾಡಿದಾಗ ಕಪೂರ್ ಅವರಿಗೆ ವಂಚನೆಯ ಬಗ್ಗೆ ತಿಳಿದುಬಂದಿದೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top