fbpx
ಸಮಾಚಾರ

ಕುವೆಂಪು ಬಗ್ಗೆ ಅವಹೇಳನ – ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಲಾಗಿದೆ ಹಾಗೂ ಕರ್ನಾಟಕದ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್, ಹಿರಿಯ ವಕೀಲರಾದ ಬಾಲನ್, ಕೆ.ಎನ್ ಜಗದೀಶ್ ಕುಮಾರ್, ಪ್ರದೀಪ್, ಸೂರ್ಯ ಮುಕುಂದರಾಜ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್​ ರೆಡ್ಡಿ ಅವರಿಗೆ ದೂರು ಸಲ್ಲಿಸಿ ಆರೋಪಿತರವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ನಾಡು ನುಡಿಯ ಹೆಮ್ಮೆ ಕುವೆಂಪುರ ಬಗ್ಗೆ ಅವಹೇಳನ ರೀತಿಯಲ್ಲಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಲಕ್ಷ್ಮಣ ಎಂಬುವವರು ಕುವೆಂಪುರ ಬಗ್ಗೆ ಕೆಟ್ಟ ಪದದಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಸಮಾಜ ಸ್ವಾಸ್ಥ ಕೆಡುವ ಪ್ರಚೋದಿತ ಹಿನ್ನಲೆ ಇಬ್ಬರ ವಿರುದ್ದ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿಗೆ ರಂಗನಾಥ್ ನೇತೃತ್ವದಲ್ಲಿ ದೂರು ನೀಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top