fbpx
ಸಮಾಚಾರ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುವ T-20 ಪಂದ್ಯದ ವೇಳಾಪಟ್ಟಿಯನ್ನು ಪ್ರಕಟಿಸಿದ ಬಿಸಿಸಿಐ!

ಈ ವರ್ಷ ಕ್ರಿಕೆಟ್ ಅಭಿಮಾನಿಗಳಿಗೆ ಹೆಚ್ಚು ಮನರಂಜನೆ ಸಿಗೋದು ಪಕ್ಕ. ಐಪಿಎಲ್ ಮನರಂಜನೆ ಮುಗಿದಿದೆ. ಮುಂದೇನು ಎಂಬ ಯೋಚನೆ ಕ್ರಿಕೆಟ್ ಪ್ರೇಮಿಗಳಿಗೆ ಇದೆ. ಅದಕ್ಕೆ ಉತ್ತರ ಸಿಕ್ಕಿದೆ. ಜೂನ್ 9 ರಿಂದ ಭಾರತ ದಕ್ಷಿಣ ಆಫ್ರಿಕಾ T- 20 ಪ್ರವಾಸ ಶುರುವಾಗಲಿದೆ. ಇದರ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ T- 20 ಪ್ರವಾಸ ಜೂನ್ 9 ರಿಂದ ಶುರುವಾಗಿ ಜೂನ್ 19 ವರೆಗೂ ನಡೆಯಲಿದೆ. ತಂಡದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ತಂಡವನ್ನು ಕೆ.ಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಯುವ ಆಟಗರಿಂದ ಕೂಡಿದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಹೇಗೆ ಪ್ರದರ್ಶಿಸುತ್ತದೆ ಎಂದು ಕಾದು ನೋಡುವ ಕುತೂಹಲ ಅಭಿಮಾನಿಗಳಿಗೆ ಹೆಚ್ಚಾಗಿದೆ.

ತಂಡದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು ಅದು ಈ ಕೆಳಕಂಡಂತೆ ಇದೆ:

ಜೂನ್ 9- ಮೊದಲ T20 ಪಂದ್ಯ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

12 ಜೂನ್- 2 ನೇ T20 ಪಂದ್ಯ (ಬಾರಾಬತಿ ಸ್ಟೇಡಿಯಂ, ಕಟಕ್)

ಜೂನ್ 14- 3ನೇ T20 ಪಂದ್ಯ (ಡಾ. ವೈಎಸ್‌ಆರ್ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ)

ಜೂನ್ 17- 4 ನೇ T20 ಪಂದ್ಯ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್ಕೋಟ್)

ಜೂನ್ 19- 5 ನೇ T20 ಪಂದ್ಯ (ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ ಮತ್ತು ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ವೀಕ್ಷಿಸಬಹುದು.

ಟೀಮ್ ಇಂಡಿಯಾ ಟಿ20 ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top