fbpx
ಸಮಾಚಾರ

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ! ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಆಯ್ಕೆ

ಇಷ್ಟು ವರ್ಷ ರೈತ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಸಂಕಷ್ಟ ಎದುರಾಗಿದೆ. ಇವರನ್ನು ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದ್ದು ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಕೆಲವು ದಿನಗಳಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬರುತ್ತಿತ್ತು.ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿದ್ದ ರೈತ ಪ್ರತಿಭಟನೆ ಕೊನೆಗಾನಣಿಸಲು ಹಣಕ್ಕೆ ಬೇಡಿಕೆ ಇರಿಸಿರುವ ಆರೋಪ ಇವರ ಮೇಲಿತ್ತು. ಇದೇ ಕಾರಣಕ್ಕೆ ಇಂದು ಶಿವಮೊಗ್ಗದಲ್ಲಿ 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದ್ದರು. ಈ ಸಮಾಲೋಚನೆಯಲ್ಲಿ ಬಹುಪಾಲು ಜನರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕಂದು ತೀರ್ಮಾನಿಸಿದರು. ಅದರಂತೆ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ಅವರು “ಇನ್ನು ಮುಂದೆ ಕೋಡಿಹಳ್ಳಿ ಚಂದ್ರಶೇಖರ್ ಹೊರಗಿಟ್ಟು ಸಂಘಟನೆ ಬಲಪಡಿಸುತ್ತೇವೆ. ಎಲ್ಲಾ ರೈತ ಸಂಘಗಳು ಒಂದಾಗಿ ಮಾತುಕತೆಗೆ ಬಂದಲ್ಲಿ ನಾನು ಅಧ್ಯಕ್ಷ ಸ್ಥಾನ ತ್ಯಜಿಸುತ್ತೇನೆ” ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top