fbpx
ಸಮಾಚಾರ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಚಂದ್ರು AAPನತ್ತ ಮುಖ

ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಹಿರಿಯ ನಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರು ಇದೀಗ ಆಪ್(ಆಮ್ ಆದ್ಮಿ ಪಕ್ಷ) ನತ್ತ ಮುಖಮಾಡಿದ್ದಾರೆ. ಜೂನ್ 22ರಂದು ದೆಹಲಿಗೆ ತೆರಳಿ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದ ಮುಖ್ಯಮಂತ್ರಿ ಚಂದ್ರ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ರವಾನಿಸಿದ್ದರು. ಎಂಎಲ್​​ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದರು.

ಕಾಂಗ್ರೆಸ್​ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top