fbpx
ಸಮಾಚಾರ

ರಸ್ತೆಗೆ ‘ನಾಥೂ ಗೋಡ್ಸೆ’ ಹೆಸರು: ವಿರೋಧದ ಬಳಿಕ ನಾಮಫಲಕ ತೆರವು

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿತ್ತು. ಇದೀಗ ನಾಮಫಲಕವನ್ನು ಕಿತ್ತೆಸೆಯಲಾಗಿದೆ.

ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ಗಾಂಧಿ ಹಂತಕ ‘ನಾಥೂರಾಮ್ ಗೋಡ್ಸೆ’ ಹೆಸರಿನ ನಾಮಫಲಕ ಹಾಕಲಾಗಿದ್ದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.. ಭಾರಿ ವಿರೋಧದ ಬಳಿಕ ನಾಮಫಲಕವನ್ನು ತೆರವು ಮಾಡಲಾಗಿದೆ.

ಅಂದಹಾಗೆ ಈ ಘಟನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುವ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top