fbpx
ಸಮಾಚಾರ

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿದ ಶಿರಸಿಯ ಬಾಲೆ!

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸೇರಲು ಜನರು ಎಷ್ಟೆಲ್ಲಾ ಕಷ್ಟ ಪಡುತ್ತಾರೆ ಎಂದು ನಮಗೆಲ್ಲಾ ತಿಳಿದಿದೆ. ಇದೆಲ್ಲದರ ಮಧ್ಯೆ ಶಿರಸಿಯ ಬಾಲೆ ತುಳಸಿ ಹೆಗಡೆ ಅವರ ಸಾಧನೆ ಇದೀಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ. ವಿಶ್ವಶಾಂತಿ ಸಂದೇಶ ಸಾರುವ ಕಲಾ ಪ್ರದರ್ಶನ ನೀಡುವ ದೇಶದ ಬಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

13 ವರ್ಷದ ಬಾಲೆ ಸುಮಾರು 7 ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಪಡಿಸುವ ಬಾಲೆ ಎಂದೇ ಪ್ರಸಿದ್ಧಿ ಗಳಿಸಿದರು. ಇವರ ಈ ಅಪರೂಪದ ಸಾಧನೆಯನ್ನು ಗಮನಿಸಿ ಇವರಿಗೆ ಅತ್ಯಂತ ಕಿರಿಯ ವಯಸ್ಸಿನಿಂದ ವಿಶ್ವಶಾಂತಿ ಸರಣಿ ಸಂದೇಶ ಸಾರುವ ಬಾಲ ಯಕ್ಷಗಾನ ಕಲಾವಿದೆ’ ಎಂದೇ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದೆ.

 

 

ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದ್ದು ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರಸ್ತುತಪಡಿಸುತ್ತಿದ್ದಾಳೆ. ಈ ಸಾಧನೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡನಲ್ಲಿ ದಾಖಲಾಗಿದ್ದು, ಯಕ್ಷಗಾನದ ಇತಿಹಾಸದಲ್ಲೂ ಇದು ಪ್ರಥಮವಾದದ್ದು.

ಪ್ರಸ್ತುತ ತುಳಸಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ 8 ನೆೇ ತರಗತಿ ಓದುತ್ತಿದ್ದು, ಇವಳ ಸಾಧನೆಯನ್ನು ಇಂಟರ್‌ನ್ಯಾಶನಲ್‌ ಬುಕ್‌ ಆಫ್‌ ರೆಕಾರ್ಡ್‌ ಕೂಡ ದಾಖಲಿಸಿದೆ. ಇದಲ್ಲದೆ ಪುಣೆಯ ಸಂಸ್ಥೆಯೊಂದು ನೀಡುವ ಇಂಡಿಯನ್‌ ಸ್ಟಾರ್‌ ಐಕಾನ್‌ ಅವಾರ್ಡ್‌ ಕೂಡ ಇವರು ಗಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top