fbpx
ಸಮಾಚಾರ

ಕೊನೆಗೂ ಎಚ್ಚೆತ್ತ ಸರ್ಕಾರ: ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ‘ರೋಹಿತ್ ಚಕ್ರತೀರ್ಥ’ ಗೆ ಗೇಟ್ ಪಾಸ್

ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥಗೆ ಗೇಟ್‌ ಪಾಸ್ ನೀಡಲಾಗಿದೆ. ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು,”ಪಠ್ಯಪುಸ್ತಕ ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥಕರನ್ನು ಸರ್ಕಾರ ನೇಮಿಸಿತ್ತು. ಶಾಲಾ ಪಠ್ಯಪುಸ್ತಕ ಮರುಪರಿಷ್ಕರಣೆಯಲ್ಲಿ ವಿವಾದಗಳು ಹೆಚ್ಚಾಗಿದ್ದವು. ಸಾಹಿತಿಗಳು, ರಾಜಕಾರಣಿಗಳು, ಮಠಾಧೀಶರು, ಪ್ರಬಲ ಜಾತಿಯ ವಿರೋಧ ಎದುರಾಗಿದ್ದರಿಂದ ರೋಹಿತ್ ಚಕ್ರತೀರ್ಥರನ್ನು ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯಿಂದ ಕೈಬಿಡಲು ಸರ್ಕಾರ ತೀರ್ಮಾನಿಸಿದೆ,” ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಸರ್ಕಾರ ಮುಂದಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top