fbpx
ಸಮಾಚಾರ

‘ರಾ ರಾ ರಕ್ಕಮ್ಮ..’ ಹುಚ್ಚಿದ್ದು ಕುಣಿದ ಬಾಲಿವುಡ್​ ಸ್ಟಾರ್​ ರಿತೇಶ್: ವಿಡಿಯೋ ನೋಡಿ

ಬಹು ನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ರಾ.ರಾ. ರಕ್ಕಮ್ಮ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿದೆ., ಕೇವಲ ಸುದೀಪ್ ಅಭಿಮಾನಿಗಳು ಮಾತ್ರವಲ್ಲದೆ ಸಕಲ ಸಿನಿಪ್ರಿಯರು ಹಾಡಿಗೆ ಮನಸೋತಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಈ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್​ ಮಾಡುವುದು ಒಂದು ಟ್ರೆಂಡ್​ ಆಗಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರೆಟಿಗಳು ಕೂಡ ರೀಲ್ಸ್​ ಮಾಡುತ್ತಾರೆ.

 

 

View this post on Instagram

 

A post shared by Ritesh Deshmukh (@riteishd)

 

ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು ರೀಲ್ಸ್​ ಮಾಡಿದ್ದಾರೆ. ಆ ಕಾರಣದಿಂದಲೂ ಈ ಗೀತೆ ತುಂಬ ಫೇಮಸ್​ ಆಗಿದೆ. ಈಗ ಬಾಲಿವುಡ್​ನ ಖ್ಯಾತ ನಟ ರಿತೇಶ್​ ದೇಶಮುಖ್​ ಅವರು ಕೂಡ ‘ರಾ ರಾ ರಕ್ಕಮ್ಮ’ ಹಾಡಿಗೆ ಮರುಳಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಸಾಂಗ್​ಗೆ ಅವರು ರೀಲ್ಸ್​ ಮಾಡುವ ಮೂಲಕ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ತಮ್ಮ ಬೆಂಬಲ ನೀಡಿದ್ದಾರೆ.

 

 

ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಜುಲೈ 28 ರಂದು ವಿಶ್ವಾದ್ಯಂತ ೩ಡಿ ಅವತರಣಿಕೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top