fbpx
ಸಮಾಚಾರ

ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಕ ಜಾಕ್ ಮಂಜು ಆಸ್ಪತ್ರೆಗೆ ದಾಖಲು!

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಇದೀಗ ರಿಲೀಸ್ ಗೆ ರೆಡಿ ಆಗಿದೆ. ಸಿನಿಮಾ ತಂಡದ ತಯಾರಿ ಕೂಡ ಸುಗಮವಾಗಿ ನಡೆಯುತ್ತಿದೆ. ಇದರ ಮಧ್ಯೆ ಸಿನಿಮಾದ ನಿರ್ಮಾಪಕ ಜಾಕ್ ಮಂಜು ಅವರು ಆಸ್ಪತ್ರೆಗೆ ಧಾಖಲಾಗಿದ್ದಾರೆ.

ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಹೀಗಾಗಿ ಇವರನ್ನು ಬನ್ನೇರುಘಟ್ಟ ಸಮೀಪ ಇರುವ ಅಪೋಲೋ ಆಸ್ಪತ್ರೆಗೆ ಧಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದೆ. ಕಳೆದ ಎರಡು ದಿನಗಳ ಹಿಂದೆಯೇ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

ಇವರು 20 ದಿನಗಳ ಹಿಂದೆಯೇ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು. ಇದಕ್ಕಾಗಿ ಕಾಲಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದ ಕಾರಣ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಇವರ ಕಾಲಿಗೆ ಸರ್ಜರಿ ಮಾಡಲಾಗಿದ್ದು ಇವರ ಆರಾಮಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇವರು ಕಳೆದ ಕೆಲವು ದಿನಗಳಿಂದ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿ ಆಗಿದ್ದ ಕಾರಣ ದೇಶಾದ್ಯಂತ ಸಂಚರಿಸಿದ್ದರು. ಹೀಗಾಗಿ ಹೆಚ್ಚು ಆಯಾಸ ಆಗಿರಬಹುದು. ಇವರು ಆಸ್ಪತ್ರೆಗೆ ಧಾಖಲಾದ ವಿಷಯ ತಿಳಿಯುತ್ತಿದಂತೆ ಇವರು ಬೇಗ ಹುಷಾರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು.

ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆ ಆಗಿ ಎಲ್ಲಾ ಕಡೆ ಸಕತ್ ಸೌಂಡ್ ಮಾಡಿದ್ದೂ ಚಿತ್ರದ ಕ್ರೇಜ್ ಮತ್ತಷ್ಟು ಹೆಚ್ಚಿಸಿದೆ. ಇದೆ ಮೊಟ್ಟ ಮೊದಲ ಬಾರಿಗೆ ಸುದೀಪ್ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದು ಅಭಿಮಾನಿಗಳಲ್ಲಿ ಕಾತುರ ಹೆಚ್ಚಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top