fbpx
ಸಮಾಚಾರ

5 ರೂ. ಡಾಕ್ಟರ್ ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ

5 ರೂಪಾಯಿ ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಚರ್ಮರೋಗ ತಜ್ಞ ಶಂಕರೇಗೌಡ ಅವರಿಗೆ ಕಳೆದ ತಿಂಗಳು ಲಘು ಹೃದಯಾಘಾತವಾಗಿತ್ತು.. ಇದೀಗ ಅವರಿಗೆ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿದೆ.

ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ ಬೆಳಗ್ಗೆ 8 ಗಂಟೆಗೆ ಶಸ್ತ್ರಚಿಕಿತ್ಸೆ ನಡೆದಿದೆ. 8 ಮಂದಿ ನುರಿತ ವೈದ್ಯರ ತಂಡ ಸರ್ಜರಿ ಮಾಡಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಶಂಕರೇಗೌಡ ಅವರು ಚಿಕಿತ್ಸೆಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಒಂದು ತಿಂಗಳ ಹಿಂದೆ ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಬೈಪಾಸ್ ಸರ್ಜರಿ ಮಾಡುವುದಾಗಿ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top