fbpx
ಸಮಾಚಾರ

ಚಿಟುಗು ಮಲ್ಲೇಶ್ವರ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾಸ್ಪದ ಸಾವು

ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ೭೫ ವರ್ಷ ವಯಸ್ಸಾಗಿತ್ತು.

ಬೆಳಿಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ ಕಂಡುಬಂದಿದ್ದು, ಸ್ನಾನಕ್ಕೆ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿರವುದು ಎಂದು ಭಕ್ತರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನಾನಕ್ಕೆ ನೀರು ಕಾಯಿಸಿಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದೇ ಅಥವಾ ಸಾವಿಗೆ ಬೇರೆ ಕಾರಣ ಇರಬಹುದೇಎಂಬ ಶಂಕೆ ಭಕ್ತರಲ್ಲಿದೆ.   ಸಾವಿನ ಬಗೆಗಿನ ಅಸಲಿ ಕಾರಣ ಇನ್ನಷ್ಟೇ ಬೆಳಕಿಗೆ ಬರಬೇಕಿದೆ.

ಅಂದಹಾಗೆ ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳಲ್ಲಿ ಇವರು ಒಬ್ಬರಾಗಿದ್ದಾರೆ. 30 ವರ್ಷಗಳ ಹಿಂದೆಯೇ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top