fbpx
ಸಮಾಚಾರ

ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ! ಗೊಂದಲದಲ್ಲಿ ಸಾರ್ವಜನಿಕರು- ಯಾಕೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ಇನ್ನು 3 ದಿನ ಬಾಕಿ ಇರುವಾಗಲೇ ಪೊಲೀಸ್ ಇಲಾಖೆಯಿಂದ ಹೊರಡಿಸಿದ ಆದೇಶ ಹಲವು ಗೊಂದಲಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿ ಅವರು ಜೂನ್ 20 ರಂದು ರಾಜ್ಯಕ್ಕೆ ಭೇಟಿನೀಡಲಿದ್ದಾರೆ. ಒಂದು ದಿನ ಪೂರ್ತಿ ಮೈಸೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಿ ಭದ್ರತೆ ವಿಷಯದಲ್ಲಿ ಹೆಚ್ಚಿನ ಗಮನ ವಹಿಸುವುದು ಪೋಲೀಸರ ಕರ್ತವ್ಯ. ಆದರೆ ಇದೀಗ ಪೊಲೀಸರು ಹೊರಡಿಸಿರುವ ಆದೇಶಗಳು ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಮಾಡಿದೆ.

ಪೊಲೀಸ್ ಇಲಾಖೆ ಪ್ರಧಾನಿ ಕಾರ್ಯಕ್ರಮದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ ಸಿಬ್ಬಂದಿ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಆದೇಶವನ್ನು ಹೊರಡಿಸಿದೆ. ಅದೇ ಆದೇಶವನ್ನೂ ಮಾಧ್ಯಮದವರು ಪಾಲಿಸಬೇಕೆಂದು ವಾರ್ತಾ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಇದಲ್ಲದೆ ಮೈಸೂರಿನ ಮೋದಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು ಆದರೆ ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಮೈಸೂರಿನವರಿಗೆ ಒಂದು ರೂಲ್ಸ್ ಮತ್ತು ಬೆಂಗಳೂರಿನವರಿಗೆ ಒಂದು ರೂಲ್ಸ್ ಎಂಬ ಅನುಮಾನ ಜನರಲ್ಲಿ ಕಾಡುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top