fbpx
ಸಮಾಚಾರ

ನಟ ದಿಗಂತ್​ ಕುತ್ತಿಗೆಗೆ ಬಲವಾದ ಪೆಟ್ಟು, ಗಂಭೀರ ಗಾಯ: ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು

ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದಾರೆ. ಗೋವಾದ ಸಮುದ್ರ ತೀರದಲ್ಲಿ ಫ್ಲಿಪ್​ ಡೈವಿಂಗ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ಅವರನ್ನು ಗೋವಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಏರ್​ ಲಿಫ್ಟ್ ಮೂಲಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಮ್ಮ ಕುಟುಂಬದ ಜೊತೆಗೆ ನಟ ದಿಗಂತ್ ಪ್ರವಾಸಕ್ಕೆಂದು ಗೋವಾಕ್ಕೆ ತೆರಳಿದ್ದರು. ಗೋವಾದ ಸಮುದ್ರ ತೀರದಲ್ಲಿ ಸಮ್ಮರ್ ಶಾಟ್‌ ಮಾಡಲು ದಿಗಂತ್ ಮುಂದಾದರು. ಸೊಮರ್‌ಸಾಲ್ಟ್ ಮಾಡುವಾಗ ದಿಗಂತ್ ಅವರ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ದಿಗಂತ್ ಅವರಿಗೆ ಪೆಟ್ಟು ಬಿದ್ದ ಕೂಡಲೆ ಅವರನ್ನು ಗೋವಾದಲ್ಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಇನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರೊಂದಿಗೆ ಕುಟುಂಬಸ್ಥರು ಮಾತನಾಡಿದ್ದು, ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಸಂಜೆ 5 ಗಂಟೆ ವೇಳೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗುವುದು ಎಂದು ದಿಗಂತ್ ಅವರ ಆಪ್ತ ಮೂಲಗಳು ತಿಳಿಸಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top