fbpx
ಸಮಾಚಾರ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ದೊಡ್ಡ ಆಘಾತ! ಯಾಕೆ ಗೊತ್ತಾ?

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಬಾಕಿ ಇದ್ದ ಒಂದು ಟೆಸ್ಟ್ ಪಂದ್ಯ ಜುಲೈ 1 ರಂದು ಇಂಗ್ಲೆಂಡ್ ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಉಭಯ ತಂಡದ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇದರ ಬೆನ್ನಲೇ ಭಾರತ ತಂಡಕ್ಕೆ ಒಂದು ದೊಡ್ಡ ಆಘಾತ ಎದುರಾಗಿದ್ದು, ಭಾರತ ತಂಡದ ಶ್ರೇಷ್ಠ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಕಳೆದ ವರ್ಷ ಇಂಗ್ಲೆಂಡ್ ಗೆ ಪ್ರವಾಸ ಬೆಳೆಸಿದ್ದಾಗ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೇವಲ 4 ಪಂದ್ಯಗಳನ್ನು ಮಾತ್ರ ಆಡಲಾಗಿತ್ತು. ಈ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈಗಾಗಿ ಬಾಕಿ ಇರುವ ಒಂದು ಪಂದ್ಯ ಉಭಯ ತಂಡಗಳಿಗೂ ಅತಿ ಮುಖ್ಯವಾದದ್ದು. ಆದರೆ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಇದೀಗ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಈ ಬಗ್ಗೆ ಬಿಸಿಸಿಐ ಮೂಲಗಳು ಮಾಹಿತಿ ನೀಡಿದ್ದು, “ಕೋವಿಡ್-19 ಪಾಸಿಟಿವ್ ಬಂದ ಕಾರಣ ಭಾರತ ತಂಡದ ಆಟಗಾರರ ಜೊತೆ ಆರ್. ಅಶ್ವಿನ್ ಇಂಗ್ಲೆಂಡ್​ಗೆ ತೆರಳಿಲ್ಲ.ಸದ್ಯ ಇವರು ಕಠಿಣ ಕ್ವಾರಂಟೈನ್​ನಲ್ಲಿದ್ದಾರೆ. ವರದಿ ನೆಗೆಟಿವ್ ಬಂದ ಬಳಿಕ ಎಲ್ಲ ನಿಯಮವನ್ನು ಪಾಲಿಸಿ ತಂಡ ಸೇರಿಕೊಳ್ಳಲಿದ್ದಾರೆ. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಅವರು ಗುಣಮುಖರಾಗುವ ನಂಬಿಕೆ ಇದೆ,” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top