fbpx
ಸಮಾಚಾರ

ಪ್ರಧಾನಿ ಮೋದಿ ಅವರಿಗೆ ‘ಆರ್ಕೆಸ್ಟ್ರಾ ಮೈಸೂರು’ ಚಿತ್ರದ ಟ್ರೈಲರ್ ನೋಡಿ ಎಂದ ನಟಿ ರಮ್ಯಾ..! ಟ್ವೀಟ್ ವೈರಲ್

ವಿಶ್ವ ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಭೇಟಿ ನೀಡಿದ್ದರು. ಇತ್ತ ನಾನಾ ಕಾರ್ಯಕ್ರಮಗಳಿಗಾಗಿ ಕರ್ನಾಟಕ ಪ್ರವಾಸದಲ್ಲಿರುವ ಮೋದಿ ಅವರಿಗೆ ‘ಆರ್ಕೆಸ್ಟ್ರಾ ಮೈಸೂರು’ ಚಿತ್ರದ ಟ್ರೈಲರ್ ನೋಡುವಂತೆ ನಟಿ ರಮ್ಯಾ ಮನವಿ ಮಾಡಿರುವುದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ನಿನ್ನೆ ರಮ್ಯಾ ಅವರು ಮೈಸೂರು ಪೂರ್ಣಾ, ನಾಗಭೂಷಣ್ ಸೇರಿದಂತೆ ಹಲವರು ನಟಿಸಿರುವ ‘ಮೈಸೂರು ಆರ್ಕೆಸ್ಟ್ರಾ’ ಸಿನಿಮಾದ ಟ್ರೈಲರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ರಿಲೀಸ್ ಮಾಡಿದ್ದರು. ಟ್ರೈಲರ್ ಬಗ್ಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಬೆನ್ನೆಲ್ಲೇ ಕರ್ನಾಟಕಕ್ಕೆ ಆಗಮಿಸಿದ್ದ, ಅದರಲ್ಲೂ ಯೋಗ ದಿನದಂದು ಮೈಸೂರಿನಲ್ಲೇ ಬೀಡು ಬಿಟ್ಟಿದ್ದ ಪ್ರಧಾನಿ ಅವರಿಗೆ ಮೈಸೂರು ಸಂಸ್ಕೃತಿಯನ್ನು ತಿಳಿದುಕೊಳ್ಳಲು ಮೈಸೂರು ಆರ್ಕೆಸ್ಟ್ರಾ ಸಿನಿಮಾದ ಟ್ರೈಲರ್ ನೋಡಿ ಎಂದು ಟ್ವಿಟ್ ಮಾಡಿದ್ದಾರೆ.

 

 

ರಮ್ಯಾ ಟ್ವೀಟ್ ಸಾರಾಂಶ:
‘ನಮ್ಮ ಮೈಸೂರಿಗೆ’ ಸ್ವಾಗತ ಪ್ರಧಾನಿ ನರೇಂದ್ರ ಮೋದಿಯವರೇ.. ಎಂದು ಸ್ವಾಗತಿಸಿದ್ದಾರೆ. ಮುಂದುವರೆಸಿ ಬರೆದಿರುವ ರಮ್ಯಾ, ಸಮಯವಿದ್ದರೆ ಮೈಸೂರಿನಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿ ಎಂದು ನಮೂದಿಸಿರುವ ರಮ್ಯಾ ಇಲ್ಲಿನ ರಸ್ತೆಗಳನ್ನು ಉದ್ಘಾಟಿಸಿ, ಇದರ ಅಗತ್ಯ ನಮಗೆ ಬಹಳಷ್ಟಿದೆ. ಇದನ್ನು ಕಲ್ಪಿಸಿದ ಸಚಿವ ನಿತಿನ್ ಗಡ್ಕರಿಗೆ ಧನ್ಯವಾದ ಎಂದೂ ಹೇಳಿದ್ದಾರೆ.

ಇದೇ ವೇಳೆ ಮೈಸೂರಿನ ಜನಪ್ರಿಯ ಮೈಲಾರಿ ಬೆಣ್ಣೆ ದೋಸೆ ರುಚಿಯನ್ನೂ ಸವಿಯಿರಿ, ಇದು ಬಹಳ ಮೃದುವಾದ ದೋಸೆ ಕೂಡಾ ಹೌದು ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ರಮ್ಯಾ ನೀವು ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯನ್ನು ವೀಕ್ಷಿಸಬಹುದು, ಸಾಧ್ಯವಾಗದಿದ್ದರೆ ಮೈಸೂರಿನ ಯುವ ಪ್ರತಿಭಾವಂತ ಮೈಸೂರಿಯನ್ನರು ಮಾಡಿದ ಆರ್ಕೆಸ್ಟ್ರಾದ ಟ್ರೈಲರ್ ವೀಕ್ಷಿಸಬಹುದು ಎಂದು, ಈ ಸಿನಿಮಾವನ್ನೂ ಪ್ರೊಮೋಟ್‌ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top