fbpx
ಸಮಾಚಾರ

ವಿಶ್ವಸಂಸ್ಥೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ!

ಹಿರಿಯ ರಾಜತಾಂತ್ರಿಕ ಅಧಿಕಾರಿಯಾಗಿರುವ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್‌) 1987ರ ಬ್ಯಾಚ್‌ನ ಅಧಿಕಾರಿಯಾಗಿರುವ ರುಚಿರಾ ಅವರು ಪ್ರಸ್ತುತ ಭೂತಾನ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದಾರೆ. ಟಿ.ಎಸ್.ತಿರುಮೂರ್ತಿ ಅವರ ನಿವೃತ್ತಿ ನಂತರ ಇವರನ್ನು ವಿಶ್ವಸಂಸ್ಥೆಯ ಭಾರತದ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ರುಚಿರಾ ಅವರು ಶೀಘ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇವರು 1991-1996 ರ ಅವಧಿಯವರೆಗೆ ಪಶ್ಚಿಮ ಯೂರೋಪ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ ಕಾಮನ್ ವೆಲ್ತ್ ದೇಶಗಳ ಜೊತೆ ಕೂಡ ಸಂಬಂಧವನ್ನು ನಿರ್ವಹಿಸಿದ್ದಾರೆ.
2011-14 ಅವಧಿಯವರೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಶಿಷ್ಟಾಚಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.ಪ್ರಸಕ್ತ ವರ್ಷದಲ್ಲಿ ವಿದೇಶಾಂಗ ಕಾರ್ಯದರ್ಶಿ ಹುದ್ದೆಗೆ ನೇಮಗೊಂಡ ಐಎಫ್‌ಎಸ್ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top