fbpx
ಸಮಾಚಾರ

ಹಿಂದೂ ಭಾವನೆಗಳಿಗೆ ಧಕ್ಕೆ ತಂದ ‘ಕಾಳಿ’ ಪೋಸ್ಟರ್: ಸ್ಪಷ್ಟನೆ ಕೊಟ್ಟ ನಿರ್ದೇಶಕಿ

ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್​ ವಿವಾದಕ್ಕೆ ಕಾರಣವಾಗಿದ್ದು, ಕಾಳಿ ದೇವಿಯ ಫೋಟೋವನ್ನು ವಿಚಿತ್ರವಾಗಿ ಬಳಸಿ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂಬ ಆಕ್ರೋಶವನ್ನು ಹುಟ್ಟುಹಾಕಿದೆ. ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿವಾದದ ಬಗ್ಗೆ ನಿರ್ದೇಶಕಿ ಸ್ಪಷ್ಟನೆ ನೀಡಿದ್ದಾರೆ.

 

 

ವಿವಾದ ಹಾಗ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ತನಗೆ ಬರುತ್ತಿರುವ ನಕಾರಾತ್ಮಕ ಪ್ರತಿಕ್ರಿಯೆಯ ನಡುವೆ ದ್ವೇಷಕ್ಕಿಂತ ಪ್ರೀತಿ ಆಯ್ಕೆ ಮಾಡಲು ಜನರನ್ನು ಕೇಳಿಕೊಂಡಿದ್ದಾರೆ. ಒಂದು ಸಂಜೆ ಕಾಳಿ ಕಾಣಿಸಿಕೊಂಡಾಗ ಮತ್ತು ಟೊರೊಂಟೊದ ಬೀದಿಗಳಲ್ಲಿ ನಡೆಯುವ ಘಟನೆಗಳ ಸುತ್ತ ಸುತ್ತುತ್ತದೆ. ನೀವು ಚಿತ್ರವನ್ನು ನೋಡಿದರೆ, ಲೀನಾ ಮಣಿಮೇಕಲೈಯನ್ನು ಬಂಧಿಸಿ ಎಂಬ ಹ್ಯಾಶ್‌ಟ್ಯಾಗ್ ಅನ್ನು ಪೋಸ್ಟ್ ಮಾಡುವುದಿಲ್ಲ, ಲವ್ ಯೂ ಲೀನಾ ಮಣಿಮೇಕಲೈ ಎಂಬ ಹ್ಯಾಶ್‌ಟ್ಯಾಗ್ ಅನ್ನು ಪೋಸ್ಟ್ ಮಾಡುತ್ತೀರಿ ಎಂದಿದ್ದಾರೆ.

ಅಲ್ಲದೇ, ಹಲವಾರು ಜನಾಂಗೀಯ ಭಿನ್ನಾಭಿಪ್ರಾಯಗಳ ನಡುವೆ ದ್ವೇಷದ ಬದಲು ಪ್ರೀತಿಯನ್ನು ಆರಿಸಿಕೊಳ್ಳುವ ಬಗ್ಗೆ ಈ ಕಾಳಿ ಮಾತನಾಡುತ್ತಾಳೆ” ಎಂದು ಲೀನಾ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

 

 

ಏನಿದು ವಿವಾದ:
ಲೀನಾ ಅವರ ಸಾಕ್ಷ್ಯಚಿತ್ರದ ಹೆಸರು ಕಾಳಿ. ಈ ಪೋಸ್ಟರ್‌ನಲ್ಲಿ ಮಾ ಕಾಳಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸಲಾಗಿದ್ದು, ಇದನ್ನು ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾ ಕಾಳಿಯ ವೇಷಭೂಷಣದಲ್ಲಿ, ಕಲಾವಿದರು ಒಂದು ಕೈಯಲ್ಲಿ ತ್ರಿಶೂಲವನ್ನು ಮತ್ತು ಒಂದು ಕೈಯಲ್ಲಿ LGBTQ ಸಮುದಾಯದ ಹೆಮ್ಮೆಯ ಧ್ವಜವನ್ನು ಹಿಡಿದಿದ್ದಾರೆ.LGBTQ-ಲೆಸ್ಬಿಯನ್, ಗೇ, ಬೈಸೆಕ್ಚುವಲ್‌ ಟ್ರಾನ್ಸ್ ಜೆಂಡರ್, ಕ್ವೀರ್ ಸಮುದಾಯವರದ್ದು.

ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top