ಈ ಬಾರಿಯ ಮಿಸ್ ಇಂಡಿಯಾ 2022 ಪ್ರಶಸ್ತಿಯು ಕರ್ನಾಟಕ ಮೂಲದ ಯುವತಿಯ ಪಾಲಾಗಿದೆ. ಭಾನುವಾರ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ವಿಎಲ್‌ಸಿಸಿ ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪ್ರಶಸ್ತಿ ಗೆದ್ದಿದ್ದಾರೆ.
ಫೆಮಿನಾ ಮಿಸ್ ಇಂಡಿಯಾ 2021 ರ ವಿಜೇತರಾದ ಮಾನಸ ವಾರಣಾಸಿ ಅವರು ಸಿನಿ ಶೆಟ್ಟಿಗೆ ಕಿರೀಟವನ್ನು ಮುಡಿಗೇರಿಸಿದ್ದಾರೆ. ರಾಜಸ್ಥಾನದ ರೂಬಲ್ ಶೇಖಾವತ್ ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ ಮತ್ತು ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಫೆಮಿನಾ ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿದ್ದಾರೆ.
Karnataka's Sini Shetty crowned Femina Miss India 2022
Read @ANI Story | https://t.co/GDTKpbp4nR#Karnataka #MissIndiaFinale2022 #SiniShetty pic.twitter.com/xg0jMffBIy
— ANI Digital (@ani_digital) July 3, 2022
ಸಿನಿ ಶೆಟ್ಟಿ ಯಾರು?
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮೂಲದವರಾಗಿರುವ ಇವರು ಮುಂಬೈ ನಲ್ಲಿ ಜನಿಸಿದರು. ಇವರು ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ ವೃತ್ತಿಪರ ಕೋರ್ಸ್ ಮಾಡುತ್ತಿದ್ದಾರೆ. ನೃತ್ಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು ತಮ್ಮ ನಾಲ್ಕನೇ ವಯಸ್ಸಿನಲ್ಲಿ ನೃತ್ಯ ಮಾಡಲು ಪ್ರಾರಂಭಿಸಿ ಹದಿನಾಲ್ಕು ವರ್ಷದವಳಿದ್ದಾಗ ತನ್ನ ಅರಂಗೇತ್ರಂ ಮತ್ತು ಭರತನಾಟ್ಯವನ್ನು ಪೂರ್ಣಗೊಳಿಸಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
