fbpx
ಸಮಾಚಾರ

ದ್ವೀಪರಾಷ್ಟ್ರದಲ್ಲಿ ತೀವ್ರ ಇಂಧನ ಕೊರತೆ; ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಶ್ರೀಲಂಕಾದ ರಾಜಧಾನಿಯಾಗಿರುವ ಕೊಲೊಂಬೊ ದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಇಂಧನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಸರ್ಕಾರ ಇಂದಿನಿಂದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಒಂದು ವಾರಗಳ ಕಾಲ ರಜೆ ಘೋಷಿಸಿದೆ.

ಇದರ ಕುರಿತು ಮಾತನಾಡಿದ ಶ್ರೀಲಂಕಾದ ಶಿಕ್ಷಣ ಸಚಿವರು ” ವಿದ್ಯಾರ್ಥಿಗಳಿಗೆ, ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಸಾರಿಗೆ ತೊಂದರೆಯ ಪರಿಣಾಮ ಬೀರದ ಪರಿಸ್ಥಿತಿಗಳಲ್ಲಿ ವಿಭಾಗೀಯ ಮಟ್ಟದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ತರಗತಿಗಳನ್ನು ನಡೆಸಲು ಅನುಮತಿಸಲಾಗುವುದು” ಎಂದು ಹೇಳಿದರು.

ಇದಲ್ಲದೆ ಶ್ರೀಲಂಕಾದ ರಾಜಧಾನಿ ಕೊಲೊಂಬೊದ ಸರ್ಕಾರಿ ಮತ್ತು ಸರ್ಕಾರಿ-ಅನುಮೋದಿತ ಖಾಸಗಿ ಶಾಲೆಗಳಲ್ಲಿ ದೀರ್ಘಾವಧಿಯ ವಿದ್ಯುತ್ ಕಡಿತ ಉಂಟಾಗಿದೆ. ಇದು ಮಕ್ಕಳ ಕಲಿಕೆಯ ಮೇಲೆ ಕೂಡ ಗಂಭೀರವಾದ ಪರಿಣಾಮ ಬೀರುತ್ತದೆ. ಇವೆಲ್ಲಾ ಅಂಶಗಳನ್ನು ಆಧರಿಸಿ ಶಾಲಾ ಕಾಲೇಜುಗಳಿಗೆ ಒಂದು ವಾರಗಳ ಕಾಲ ರಜೆಯನ್ನು ಘೋಷಿಸಲಾಗಿದೆ.

ಇದಾದ ನಂತರ ಆನ್ಲೈನ್ ತರಗತಿಗಳನ್ನು ಶುರುಮಾಡುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದಕ್ಕೆ ಅನುಕೂಲವಾಗುವಂತೆ ಶ್ರೀಲಂಕಾದ ಲೋಕೋಪಯೋಗಿ ಆಯೋಗವು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸದಿರಲು ಒಪ್ಪಿಕೊಂಡಿದೆ ಎಂದು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top