ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಅವರನ್ನು ಹಾಡಗಾಗಲೇ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಈ ಆಘಾತಕಾರಿ ಕೊಲೆಯಾಗಿದ್ದಾರೆ. ಭಕ್ತರು ಎಂಬ ಹೇಳಿಕೊಂಡು ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಓಡಿ ಹೋಗಿದ್ದಾರೆ.
ಸರಳ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ : ಹುಬ್ಬಳ್ಳಿ pic.twitter.com/ycEdIYIIqO
— Pallavi gowda (@pallavigowda31) July 5, 2022
60 ಬಾರಿ ಇರಿತ:
ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಡೆಸಿದ ಮಾರಕ ದಾಳಿಗೆ ಕೇವಲ 40 ಸೆಕೆಂಡ್ ಗಳಲ್ಲಿ ಚಂದ್ರಶೇಖರ್ ಗುರೂಜಿ ಮೃತಪಟ್ಟಿದ್ದಾರೆ. ಸ್ವಾಮೀಜಿ ಕಾಲಿಗೆ ಬೀಳುವ ನೆಪದಲ್ಲಿ ಬಂದು ದುರುಳರು ಚಾಕು ಇರಿದು ಹತ್ಯೆ ಮಾಡಿದ್ದಾರೆ. ಆರೋಪಿಗಳು ಭೇಟಿಯಾಗಲು ಕರೆಸಿಕೊಂಡು ಗುರೂಜಿ ಹತ್ಯೆಗೈದಿದ್ದಾರೆ. ಓರ್ವ ಕಾಲಿಗೆ ಬೀಳುತ್ತಾನೆ. ಮತ್ತೋರ್ವ ಗುರೂಜಿಗೆ ಚಾಕು ಇರಿದಿದ್ದಾರೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. 60ಕ್ಕೂ ಹೆಚ್ಚು ಬಾರಿ ಚಾಕು ಇರಿದಿದ್ದಾರೆ.
ಕೊಲೆ ನಡೆದ ಸ್ಥಳಕ್ಕೆ ಪೊಲೀಸರು ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಚಂದ್ರಶೇಖರ್ ಅವರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ.
ಅಂದಹಾಗೆ ಚಂದ್ರಶೇಖರ್ ಅವರುವಾಸ್ತು ವಿನ್ಯಾಸದ ಬಗ್ಗೆ ಸಲಹೆ ನೀಡುವ ಮೂಲಕ ಹೆಸರುವಾಸಿಯಾಗಿದ್ದರು. ವಾಸ್ತು ಶಾಸ್ತ್ರದ ಬಗ್ಗೆ ಹಲವು ಪುಸ್ತಕಗಳನ್ನೂ ಕೂಡ ಬರೆದಿದ್ದರು. ಸರಳ ವಾಸ್ತು ವಿಷಯದ ಬಗ್ಗೆ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದರು. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
